ಮಂಡ್ಯದಲ್ಲಿ ದೇವೇಗೌಡ ಕುಟುಂಬದ ವಿರುದ್ಧವೇ ತಿರುಗಿ ಬಿದ್ದ ಕಾರ್ಯಕರ್ತರು

ಮಂಡ್ಯದಲ್ಲಿ ದೇವೇಗೌಡ ಕುಟುಂಬದ ವಿರುದ್ಧವೇ ತಿರುಗಿ ಬಿದ್ದ ಕಾರ್ಯಕರ್ತರು

ಮಂಡ್ಯ: ಜಿಲ್ಲೆಯಲ್ಲಿ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಕುಟುಂಬದ ವಿರುದ್ಧ ಕಾರ್ಯಕರ್ತರು ತಿರುಗಿ ಬಿದ್ದಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಟಿಕೆಟ್ ಅಸಮಾಧಾನ ಬಹಿರಂಗವಾಗಿಯೇ ಸ್ಪೋಟಗೊಂಡಿದ್ದು, ಸೋಷಿಯಲ್ ಮೀಡಿಯಾಗಳಲ್ಲಿ ಜೆಡಿಎಸ್ ವಿರುದ್ಧದ ಪೋಸ್ಟ್ ಗಳು ಹರಿದಾಡುತ್ತಿವೆ.

ಅಲ್ಲದೇ ಟಿಕೆಟ್ ಯಾರಿಗೆ ಮಂಡ್ಯದ ಕೆಆರ್ ಪೇಟೆಯಲ್ಲಿ ನೀಡಬೇಕು ಎನ್ನುವ ಪರ-ವಿರೋಧದ ಚರ್ಚೆಗಳು ಆರಂಭಗೊಂಡಿವೆ.

ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಪಾಲಿಟಿಕ್ಸ್ ಜೋರಾಗಿದೆ. ಜೆಡಿಎಸ್ ಪಕ್ಷದಿಂದ ಟಿಕೆಟ್ ಯಾರಿಗೆ ನೀಡಬೇಕು ಎನ್ನುವ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ಇದಷ್ಟೇ ಅಲ್ಲದೇ ಕೆ ಆರ್ ಪೇಟೆ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರದಲ್ಲಿ ಕಾರ್ಯಕರ್ತರ ಅಸಮಾಧಾನವೂ ಹೊರ ಬಿದ್ದಿದೆ.

ಒಂದು ಕಡೆ ರೇವಣ್ಣ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನವನ್ನು ಶೀಲನೆರೆಯ ಜೆಡಿಎಸ್ ಕಾರ್ಯಕರ್ತರು ಹೊರ ಹಾಕಿದ್ದಾರೆ. ಮತ್ತೊಂದೆಡೆ ಸೋಷಿಯಲ್ ಮೀಡಿಯಾದಲ್ಲಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧವೇ ಕಿಕ್ಕೇರಿ ಸುರೇಶ್ ಪೋಸ್ಟ್ ಹಾಕಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಇನ್ನೂ ಕೆ ಆರ್ ಪೇಟೆ ಕ್ಷೇತ್ರದಲ್ಲಿ ಹೆಚ್ ಟಿ ಮಂಜು ಬದಲಿಗೆ, ಹೆಚ್ ಡಿ ರೇವಣ್ಣಗೆ ಟಿಕೇಟ್ ಕೊಡುತ್ತಿರೋ ವಿಚಾರಕ್ಕಾಗಿ ಶೀಲನೆರೆ ಕಾರ್ಯಕರ್ತ ಮರಡಹಳ್ಳಿ ಯೋಗೇಶ್ ನಿಂದ ಹೆಚ್ ಡಿ ರೇವಣ್ಣ ವಿರುದ್ಧವೂ ವಾಗ್ಧಾಳಿ ನಡೆಸಿದ್ದಾರೆ.

ಇನ್ನೂ ಜೆಡಿಎಸ್ ಕಾರ್ಯಕರ್ತ ಕಿಕ್ಕೇರಿ ಸುರೇಶ್ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಮುಖಂಡ ಬಿಎಲ್ ದೇವರಾಜುಗೆ ಟಿಕೆಟ್ ಕೊಡಬೇಕು ಎಂದು ಒತ್ತಾಯಿಸಿದ್ದಾರೆ. ಅಲ್ಲದೇ ಅವರಿಗೆ ಟಿಕೆಟ್ ಕೊಡದಿದ್ದರೇ ಮಾಜಿ ಸಿಎಂ ಕುಮಾರಸ್ವಾಮಿ ಕೂದಲಿಗೆ ಸಮ ಎಂಬುದಾಗಿ ಕಿಡಿ ಕಿಡಿಯಾಗಿದ್ದಾರೆ.

ವರದಿ: ಗಿರೀಶ್ ರಾಜ್, ಮಂಡ್ಯ