ಮಂಡ್ಯದಲ್ಲಿ ಪಂಚರತ್ನ ರಥಯಾತ್ರೆ ವೇಳೆ ಅವಘಡ: ಯಾತ್ರೆಗೆ ಬಂದಿದ್ದ ಆಟೋ ಅಪಘಾತ, 12 ಮಂದಿಗೆ ಗಾಯ

ಮಂಡ್ಯ : ಜೆಡಿಎಸ್ ನ ಪಂಚರತ್ನ ಯಾತ್ರೆಗೆ ಬಂದು ತಮ್ಮ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿ 12 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲದ ಬಳಿ ಘಟನೆ ನಡೆದಿದೆ.
ಅಪಘಾತದಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು, 11 ಮಂದಿಗೆ ಗಾಯವಾಗಿದೆ. ಡಿಕ್ಕಿಯ ವೇಳೆ ಆಟೋ ಮಗುಚಿ ಬಿದ್ದಿದ್ದು, ಆಟೋದಲ್ಲಿ ಇದ್ದವರಿಗೆ ಗಾಯವಾಗಿದೆ. ಗಾಯಾಳುಗಳಿಗೆ ಬೆಳ್ಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಾಗಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.