ಮಂಡ್ಯದಲ್ಲಿ ಪ್ರತಿಮೆ ಪಾಲಿಟಿಕ್ಸ್ : ಇಂದು ಹೆಚ್.ಡಿ.ಕುಮಾರಸ್ವಾಮಿಯಿಂದ `ಬಸವಣ್ಣ' ಪ್ರತಿಮೆ ಅನಾವರಣ!

ಮಂಡ್ಯ : ರಾಜ್ಯ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳಿಂದ ಪ್ರತಿಮೆ ಪಾಲಿಟಿಕ್ಸ್ ಶುರುವಾಗಿದ್ದು, ಮಂಡ್ಯದಲ್ಲಿ ಬಿಜೆಪಿಯ ಬಿ.ವೈ. ವಿಜಯೇಂದ್ರ ಅವರು ಶಿವಕುಮಾರ ಸ್ವಾಮೀಜಿ ಪುತ್ಥಳಿ ಉದ್ಘಾಟಿಸಿದ ಬೆನ್ನಲ್ಲೇ ಇಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬಸವಣ್ಣನ ಪ್ರತಿಮೆ ಅನಾವರಣಗೊಳಿಸಲಿದ್ದಾರೆ.
ಮಂಡ್ಯ ಜಿಲ್ಲೆ ಮೇಲುಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾಚಳ್ಳಿ ಗ್ರಾಮದಲ್ಲಿಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬಸವಣ್ಣನ ಪುತ್ಥಳಿ ಅನಾವರಣಗೊಳಿಸಲಿದ್ದಾರೆ. 20 ದಿನದ ಹಿಂದೆ ಶಿವಕುಮಾರ ಸ್ವಾಮೀಜಿ ಪುತ್ಥಳಿ ಅನಾವರಣ ಆಗಿತ್ತು. ಇದರ ಬೆನ್ನಲ್ಲೇ ಬಸವಣ್ಣನ ಪುತ್ಥಳಿ ಅನಾವರಣಗೊಳಿಸಲಾಗುತ್ತಿದೆ.
ಬಿಜೆಪಿ ಸಂಭಾವ್ಯ ಅಭ್ಯರ್ಥಿ ಡಾ.ಇಂದ್ರೇಶ್ ನಿರ್ಮಾಣ ಮಾಡಿಸಿದ್ದ ಪುತ್ಥಳಿ ಶಿವಕುಮಾರ ಸ್ವಾಮೀಜಿ ಪುತ್ಥಳಿಯನ್ನು ವಿಜಯೇಂದ್ರ ಉದ್ಘಾಟಿಸಿದ್ದರು. ಇಂದು ಹೆಚ್.ಡಿ ಕುಮಾರಸ್ವಾಮಿ ಬಸವಣ್ಣನ ಪುತ್ಥಳಿ ಅನಾವರಣ ಮಾಡಲಿದ್ದಾರೆ.