ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮಿ ದರ್ಶನ ಪಡೆದ ಸಿಎಂ ಬೊಮ್ಮಾಯಿ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಂತ್ರಾಲಯಕ್ಕೆ ಭೇಟಿ ನೀಡಿ ಕಾಮಧೇನು ಶ್ರೀ ರಾಘವೇಂದ್ರ ಸ್ವಾಮಿ ದರ್ಶನ ಪಡೆದರು.
ಜನಸಂಕಲ್ಪಯಾತ್ರೆಗೂ ಮುನ್ನ ಸಿಎಂ ಬಸವರಾಜ ಬೊಮ್ಮಾಯಿ ಶ್ರೀ ರಾಘವೇಂದ್ರ ಸ್ವಾಮಿ ದರ್ಶನ ಪಡೆದರು.
2023ಕ್ಕೆ ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಿಸುವ ಸಂಕಲ್ಪ
2023ಕ್ಕೆ ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಿಸುವ ಸಂಕಲ್ಪಮಾಡಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.ರಾಯಚೂರು ತಾಲೂಕಿನ ಗಿಲ್ಲೆಸುಗೂರಿನಲ್ಲಿ ನಡೆದೆ ಜನ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ 2023ಕ್ಕೆ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಬರಲಿದೆ. ನಮ್ಮ ಸರ್ಕಾರ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಿದೆ. ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಿದ್ದೇವೆ ಎಂದರು.
ಬೊಮ್ಮಾಯಿ ಆರ್ಎಸ್ಎಸ್ ಕೈಗೊಂಬೆ ಅಂತಾ ಸಿದ್ಧರಾಮಯ್ಯ ಆರೋಪ ಮಾಡಿರುವ ವಿಚಾರಕ್ಕೆ ತಿರುಗೇಟು ನೀಡಿದ ಸಿಎಂ ಕಾಂಗ್ರೆಸ್ಗೆ ಆರ್ಎಸ್ಎಸ್ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. 'ಆರ್ಎಸ್ಎಸ್ ಇಡೀ ಭಾರತವನ್ನು ಒಗ್ಗೂಡಿಸುತ್ತಿದೆ. ಆರ್ಎಸ್ಎಸ್ ದೇಶದಲ್ಲಿ ದೀನದಲಿತರ ಸೇವೆ ಮಾಡುತ್ತಿದೆ. ಕಾಂಗ್ರೆಸ್ಗೆ ಆರ್ಎಸ್ಎಸ್ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಸಿದ್ದರಾಮಯ್ಯ ಸಮಾಜವಾದಿಯಿಂದ ಬಂದಿರುವವರು, ಕಾಂಗ್ರೆಸ್ ಸೇರಿದ ದಿನವೇ ಸಮಾಜವಾದಿ ಮನೆಯಲ್ಲಿ ಮಡಚಿಟ್ಟಿದ್ದೀರಿ ಎಂದು ವಾಗ್ದಾಳಿ ನಡೆಸಿದರು.