ಮಂತ್ರಿಸ್ಥಾನ ನೀಡುವ ಅವಶ್ಯಕತೆ ಇಲ್ಲ ಎಂದು ಸಿಎಂ ಬೊಮ್ಮಾಯಿಗೆ ತಿಳಿಸಿದ್ದೆ: ಕೆ.ಎಸ್.ಈಶ್ವರಪ್ಪ

ಬೆಂಗಳೂರು: ಮಂತ್ರಿಸ್ಥಾನ ನೀಡುವ ಅವಶ್ಯಕತೆ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ತಿಳಿಸಿದ್ದೇನೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ರಾಜಕಾರಣದಲ್ಲಿ ಏನೇನು ಆಗುತ್ತದೆ ಅಂತಾ ಯಾರಿಗೂ ಗೊತ್ತಾಗಲ್ಲ.
ಹೀಗಾಗಿ ಸಿಎಂ ಬೊಮ್ಮಾಯಿ ಮಂತ್ರಿ ಮಾಡುತ್ತೇವೆ ಎಂದು ಹೇಳಿದ್ದರು. ಸಂಪುಟ ವಿಸ್ತರಣೆಗೆ ಏನೇನು ಸಮಸ್ಯೆಗಳಿದೆಯೋ ಗೊತ್ತಿಲ್ಲ. ಪಕ್ಷ ಮತ್ತು ಸರ್ಕಾರಕ್ಕೆ ಸಮಸ್ಯೆ ಮಾಡಲು ನಾನು ತಯಾರಿಲ್ಲ. ಮಂತ್ರಿ ಮಾಡುವ ಅವಶ್ಯಕತೆ ಇಲ್ಲ ಎಂದು ಸಿಎಂಗೆ ತಿಳಿಸಿದ್ದೇನೆ ಎಂದರು.