ಮಂಸೋರೆ ನಿರ್ದೇಶನದ '19.20.21' ಸಿನಿಮಾ ರಿಲೀಸ್‌ಗೆ ಮುಹೂರ್ತ ಫಿಕ್ಸ್

ಮಂಸೋರೆ ನಿರ್ದೇಶನದ '19.20.21' ಸಿನಿಮಾ ರಿಲೀಸ್‌ಗೆ ಮುಹೂರ್ತ ಫಿಕ್ಸ್

ವಿಭಿನ್ನ ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳುವ ನಿರ್ದೇಶಕ ಮಂಸೋರೆ. ಈಗಾಗಲೇ ಇವರು ನಿರ್ದೇಶಿಸಿದ ಸಿನಿಮಾಗಳಿಗೆ ರಾಷ್ಟ್ರ ಪ್ರಶಸ್ತಿ ಕೂಡ ಲಭಿಸಿದೆ. ಈ ಬಾರಿ ಟೈಟಲ್‌ನಿಂದಲೇ ಗಮನ ಸೆಳೆಯುತ್ತಿದ್ದಾರೆ.

'19.20.21' ಸಿನಿಮಾ ಮೂಲಕ ಮಂಸೋರೆ ಹೊಸ ಕ್ರಾಂತಿ ಸೃಷ್ಟಿಸಲು ಸಜ್ಜಾಗಿದ್ದಾರೆ.

ಟೀಸರ್ ಮೂಲಕ ಬಹಳ ನಿರೀಕ್ಷೆ ಮೂಡಿಸಿರುವ ಈ ಚಿತ್ರ ಮಾರ್ಚ್ 3ರಂದು ರಿಲೀಸ್ ಆಗುತ್ತಿದೆ. ಅದಕ್ಕೂ ಮುನ್ನ ಚಿತ್ರತಂಡ ಟ್ರೈಲರ್ ರಿಲೀಸ್ ಮಾಡಿದೆ. ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ ಹಾಗೂ ನಾದಬ್ರಹ್ಮ ಹಂಸಲೇಖ ಸಿನಿಮಾದ ಟ್ರೈಲರ್ ರಿಲೀಸ್ ಮಾಡಿದ್ದಾರೆ.

"ಕರಾವಳಿಯಲ್ಲಿ ಎರಡು ದಶಕಗಳ ಕಾಲ ಒಂದು ಸಮುದಾಯ ಅನುಭವಿಸಿದ ನೋವು, ಆ ನೋವಿನ ವಿರುದ್ಧ ನಡೆಸಿದ ಹೋರಾಟ ಈ ಸಿನಿಮಾ ಮಾಡಲು ಸ್ಪೂರ್ತಿ. ಈ ಘಟನೆಗೆ ಸಂಬಂಧಿಸಿದಂತೆ ಕಳೆದ ಒಂಭತ್ತು ವರ್ಷದಿಂದ ಅಧ್ಯಯನ ಮಾಡಿ ಮಾಹಿತಿ ಕಲೆ ಹಾಕಿದ್ದೇನೆ. 2021ರಲ್ಲಿ ಘಟನೆಗೆ ಸಂಬಂಧಿಸಿದ ತೀರ್ಪು ಬಂದ ಮೇಲೆ ಸಿನಿಮಾ ಮಾಡಲು ನಿರ್ಧರಿಸಿದ್ದೆ." ಎಂದು ನಿರ್ದೇಶಕ ಮಂಸೋರೆ ಹೇಳಿದ್ದಾರೆ.