ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರೇ ಗಮನಿಸಿ : 2023-24ನೇ ಸಾಲಿನ ವಸತಿ ಶಾಲೆ 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರೇ ಗಮನಿಸಿ : 2023-24ನೇ ಸಾಲಿನ ವಸತಿ ಶಾಲೆ 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಡಿಕೇರಿ: ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 2023-24ನೇ ಸಾಲಿಗೆ 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯ ಸರ್ಕಾರವು ಸ್ಥಾಪಿಸಿರುವ ಮೊರಾರ್ಜಿ ದೇಸಾಯಿ ಶಾಲೆಗಳಲ್ಲಿ 6ನೇ ತರಗತಿಯಿಂದ 10 ನೇ ತರಗತಿಯವರೆಗೆ ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 06 ರಿಂದ 12 ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಈ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯ ಪುಸ್ತಕ ಹಾಗೂ ಇನ್ನಿತರೆ ಸಾಮಾಗ್ರಿಗಳನ್ನು ನೀಡುವುದರ ಜೊತೆಗೆ ಉತ್ತಮವಾದ ವಿದ್ಯಾಭ್ಯಾಸ ನೀಡಲಾಗುತ್ತಿದೆ. ಈ ಶಾಲೆಗಳಲ್ಲಿ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಅಂದರೆ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರವೇಶ ಲಭ್ಯವಿದೆ.

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ರೂ.2.50 ಲಕ್ಷಗಳು, ಪರಿಶಿಷ್ಟ ವರ್ಗದವರಿಗೆ ರೂ.2.50 ಲಕ್ಷಗಳು ಹಾಗೂ ಹಿಂದುಳಿದ ವರ್ಗದ ಪ್ರವರ್ಗ-1 ರವರಿಗೆ ರೂ. 2.50 ಲಕ್ಷ ಮತ್ತು ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ರವರಿಗೆ ರೂ. 1 ಲಕ್ಷಗಳ ಆದಾಯ ಮಿತಿ ಇರುತ್ತದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಶೇ.50 ರಷ್ಟು ಸೀಟುಗಳು ವಿದ್ಯಾರ್ಥಿನಿಯರಿಗೆ ಲಭ್ಯವಿರುತ್ತದೆ. ಒಮ್ಮೆ ಈ ವಸತಿ ಶಾಲೆಗಳಿಗೆ ವಿದ್ಯಾರ್ಥಿ ಸೇರಿದಲ್ಲಿ 12 ನೇ ತರಗತಿಯವರೆಗೆ ಉಚಿತವಾಗಿ ವಿದ್ಯಾಭ್ಯಾಸ ಮಾಡಬಹುದು.