ಮಠಾಧೀಶರ ರಕ್ಷಣೆಗೆ ಕಾಯ್ದೆ ರೂಪಿಸುವಂತೆ ಮುರುಘಾ ಮಠದ ಬಸವಪ್ರಭು ಸ್ವಾಮೀಜಿ ಒತ್ತಾಯ

ಮಠಾಧೀಶರ ರಕ್ಷಣೆಗೆ ಕಾಯ್ದೆ ರೂಪಿಸುವಂತೆ ಮುರುಘಾ ಮಠದ ಬಸವಪ್ರಭು ಸ್ವಾಮೀಜಿ ಒತ್ತಾಯ

ಚಿತ್ರದುರ್ಗ: ಪ್ರಸ್ತುತ ದಿನಗಳಲ್ಲಿ ಪೋಕ್ಸೋ ಸೇರಿದಂತೆ ಹಲವು ಕಾನೂನುಗಳನ್ನು ದುರ್ಬಳಕೆ ಮಾಡಿಕೊಂಡು ಮಠಾಧೀಶರ ಹಕ್ಕಿಗೆ ಚ್ಯುತಿ ಉಂಟು ಮಾಡಲಾಗುತ್ತಿದೆ. ಹಾಗಾಗಿ ಮಠಾಧೀಶರ ರಕ್ಷಣೆಗೆ ಸರ್ಕಾರ ಸೂಕ್ತ ಕಾಯ್ದೆ ರೂಪಿಸಬೇಕು ಎಂದು ಮುರುಘಾ ಮಠದ ಉಸ್ತುವಾರಿಯಾಗಿದ್ದ ಬಸವಪ್ರಭು ಸ್ವಾಮೀಜಿ ಒತ್ತಾಯಿಸಿದ್ದಾರೆ. ಕಾಯ್ದೆ ಮೂಲಕ ಮಠಾಧೀಶರ ರಕ್ಷಣೆಯಾಗದಿದ್ದರೆ ಮುಂದಿನ ದಿನಗಳಲ್ಲಿ ಯಾರೂ ಸಹ ಮಠಾಧೀಶರ ಪಟ್ಟಕ್ಕ ಏರಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.