ಮಡಿಕೇರಿ: ಕಾಂಗ್ರೆಸ್ ಸೇರಿದ ಆಮ್ ಆದ್ಮಿ ಪಕ್ಷದ ಚುನಾವಣಾ ಅಭ್ಯರ್ಥಿ

ಮಡಿಕೇರಿ: ಕಾಂಗ್ರೆಸ್ ಸೇರಿದ ಆಮ್ ಆದ್ಮಿ ಪಕ್ಷದ ಚುನಾವಣಾ ಅಭ್ಯರ್ಥಿ

ಕೊಡಗು, ಎ.5: ಮಡಿಕೇರಿ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಧಿಕೃತ ಅಭ್ಯರ್ಥಿ ಟಿ.ಕೆ.ಸಾಯಿಕುಮಾರ್ ಸಿದ್ದಾಪುರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ವಿರಾಜಪೇಟೆ ತಾಲೂಕಿನ ಸಿದ್ದಾಪುರದಲ್ಲಿ ನಡೆದ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಕಾಂಗ್ರೆಸ್ ಪಕ್ಷ ಓಬಿಸಿ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.

ಈ ಸಂದರ್ಭ ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್ ಪೊನ್ನಣ್ಣ ಉಪಸ್ಥಿತರಿದ್ದರು.