ಮಡಿಕೇರಿಯ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಮಡಿಕೇರಿಯ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಡಿಕೇರಿ : ವಿರಾಜಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ವಿಎಫ್4 ಬೇತ್ರಿ, ವಿಎಫ್5 ಪಾಲಂಗಾಲ ಫೀಡರ್ನಲ್ಲಿ 'ಎಬಿ' ಕೇಬಲ್ ಅಳವಡಿಸುವ ಕಾಮಗಾರಿಯನ್ನು ನಿರ್ವಹಿಸಬೇಕಿರುವುದರಿಂದ ಫೆಬ್ರವರಿ, 10 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ

ಆದ್ದರಿಂದ ಕುಕ್ಲೂರು, ಬೇತ್ರಿ, ಕದನೂರು, ಕಾಕೋಟುಪರಂಬು, ನಾಲ್ಕೇರಿ, ಕಡಂಗಮರೂರು, ಕೆದಮಳ್ಳೂರು, ಪಾಲಂಗಾಲ, ಬೇಟೋಳಿ, ಗುಂಡಿಗೆರೆ, ಚಿಟ್ಟಾಡೆ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.