ಮತದಾರರನ್ನು ಓಲೈಕೆ ಮಾಡಲು ಆಮೀಷ ಅರೋಪ : ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ದೂರು

ಮತದಾರರನ್ನು ಓಲೈಕೆ ಮಾಡಲು ಆಮೀಷ ಅರೋಪ : ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ದೂರು

ಬೆಂಗಳೂರು : ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮತದಾರರನ್ನು ಓಲೈಕೆ ಮಾಡಲು ಬಿಜೆಪಿ ನಾಯಕರು ಆಮೀಷ ಒಡ್ಡುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕರ ವಿರುದ್ಧ ಇಂದು ಕಾಂಗ್ರೆಸ್ ನಾಯಕರು ದೂರು ನೀಡಿದ್ದಾರೆ.

ಬಿಜೆಪಿ ನಾಯಕರ ವಿರುದ್ಧ ಚುನಾವಣಾ ಅಕ್ರಮ ಆರೋಪ ಸಂಬಂಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಕಾಂಗ್ರೆಸ್ ನಾಯಕರು ದೂರು ದಾಖಲಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸಿಎಂ ಬಸವರಾಜ ಬೊಮ್ಮಾಯಿ, ನಳಿನ್ ಕುಮಾರ್ ಕಟೀಲು, ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದಾರೆ.

ದೂರು ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಚುನಾವಣೆಯಲ್ಲಿ ಸೋಲ್ತೀವಿ ಅಂತ ಬಿಜೆಪಿಗೆ ಮನವರಿಕೆ ಆಗಿದೆ. ಹೀಗಾಗಿ ಬಿಜೆಪಿಯವರು ಒಂದು ಸಂಚು ರೂಪಿಸಿದ್ದಾರೆ. ಇದರಲ್ಲಿ ಜೆ.ಪಿ.ನಡ್ಡಾ, ನಳಿನ್ ಕುಮಾರ್ ಕಟೀಲು, ಬೊಮ್ಮಾಯಿ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇದ್ದಾರೆ. ಚುನಾವಣೆಯಲ್ಲಿ 30 ಸಾವಿರ ಕೋಟಿ ಖರ್ಚು ಮಾಡಲು ಈಗಾಗಲೇ ಬಿಜೆಪಿ ತೀರ್ಮಾನ ಮಾಡಿದೆ ಎಂದು ಆರೋಪಿಸಿದ್ದಾರೆ.