ಮತಾಂತರಗೊಂಡರೆ ಮೀಸಲಾತಿ ಕೇಳುವಂತಿಲ್ಲ; ಹೈಕೋರ್ಟ್
ಚೆನ್ನೈ: ಮತಾಂತರಗೊಂಡವರು ತಮ್ಮ ಹಿಂದಿನ ಜಾತಿಯ ಮೀಸಲಾತಿಯ್ನು ಕೇಳುವಂತಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ. ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದ ವ್ಯಕ್ತಿಯೊಬ್ಬ ಮೀಸಲಾತಿ ಸಲುವಾಗಿ ಸಲ್ಲಿಸಿದ್ದ ಮೇಲ್ಮನವಿಯನ್ನು ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್ ಶನಿವಾರ ಈ ಮಹತ್ವದ ಆದೇಶವನ್ನು ಹೊರಡಿಸಿದೆ. ನ್ಯಾಯಾಧೀಶ ಜಿ.ಆರ್.ಸ್ವಾಮಿನಾಥನ್ ನೇತೃತ್ವದ ಪೀಠ ಈ ಆದೇಶ ನೀಡಿದೆ.