ಮತ್ತೆ ಪಾಕಿಸ್ತಾನಿ ಯುವತಿಯ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ

ಮತ್ತೆ ಪಾಕಿಸ್ತಾನಿ ಯುವತಿಯ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ

ನಟಿ ರಶ್ಮಿಕಾ ಮಂದಣ್ಣ ಅವರು ನಟಿಸಿರುವ ‘ಮಿಷನ್ ಮಜ್ನು’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾ ಮೇಲೆ ಫ್ಯಾನ್ಸ್​ ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ‘ಮಿಷನ್​ ಮಜ್ನು’ ಚಿತ್ರಕ್ಕೆ ಸಿದ್ದಾರ್ಥ್​ ಮಲ್ಹೋತ್ರಾ ಹೀರೋ. ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ಬಣ್ಣ ಹಚ್ಚಿದ್ದಾರೆ. ಬಹುನಿರೀಕ್ಷಿತ ‘ಮಿಷನ್​ ಮಜ್ನು’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಅವರಿಗೆ ಪಾಕಿಸ್ತಾನಿ ಹುಡುಗಿ ಪಾತ್ರ ನೀಡಲಾಗಿದೆ. ಈ ಹಿಂದೆ ಅವರು ‘ಸೀತಾ ರಾಮಂ’ ಚಿತ್ರದಲ್ಲೂ ಪಾಕಿಸ್ತಾನಿ ಯುವತಿಯಾಗಿ ನಟಿಸಿದ್ದರು.