ಮತ್ತೆ ಬಿಎಸ್ವೈ ಆಸರೆಗೆ ಕೈಚಾಚಿದ ಬಿಜೆಪಿ: ವಿಜಯೇಂದ್ರರನ್ನು ಅಖಾಡಕ್ಕಿಳಿಸಲು ನಿರ್ಧಾರ- ಜಿಲ್ಲಾ ಸಭೆಗಳ ಜವಾಬ್ದಾರಿ; ವರದಿ,ವಿವರ
ಬೆಂಗಳೂರು, ಫೆಬ್ರವರಿ 9: ಮಾಜಿ ಮುಖ್ಯಮಂತ್ರಿ ಹಾಗೂ ಪ್ರಭಾವಿ ನಾಯಕ ಬಿಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ನಡೆಸಿಕೊಂಡ ರೀತಿಯಿಂದ ಬೆಂಬಲಿಗರು ಅಸಮಾಧಾನಗೊಂಡಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಈ ಎಲ್ಲ ಕೋಲಾಹಲದ ನಡುವೆ, ಬಿಎಸ್ವೈ ಪುತ್ರ ವಿಜಯೇಂದ್ರ ಅವರನ್ನು ಅಖಾಡಕ್ಕಿಳಿಸಲು ಬಿಜೆಪಿ ತೀರ್ಮಾನಿಸಿದೆ.
140-150 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ
ವಿಜಯೇಂದ್ರ ಅವರು ತಮ್ಮ ನೇಮಕದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಯಡಿಯೂರಪ್ಪನವರ ಬಗ್ಗೆ ಅನುಕಂಪದ ಹೇಳಿಕೆಗಳನ್ನು ನೀಡುವ ಮೂಲಕ ಕೆಲವು ವ್ಯಕ್ತಿಗಳು ಬಿಜೆಪಿಯೊಳಗೆ ಸಂಘರ್ಷವನ್ನು ಹುಟ್ಟುಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿಸಿದರು. 'ನಾವು ಅದಕ್ಕೆ ಅವಕಾಶ ನೀಡುವುದಿಲ್ಲ. ಬಿಜೆಪಿಯ ಎಲ್ಲಾ ನಾಯಕರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ' ಎಂದು ಅವರು ಹೇಳಿದರು. ಮುಂಬರುವ ಚುನಾವಣೆಯಲ್ಲಿ 140-150 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು