ಮತ್ತೆ ಮುಷ್ಕರಕ್ಕಿಳಿಯಲು ನಿರ್ಧರಿಸಿದ ಸಾರಿಗೆ ನೌಕರರು
ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮತ್ತೆ ಬೀದಿಗಿಳಿಯಲು ಸಾರಿಗೆ ನೌಕರರು ಸಜ್ಜಾಗಿದ್ದಾರೆ. ಕೊಟ್ಟ ಮಾತು ತಪ್ಪಿರುವ ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ರಾಜ್ಯ ವ್ಯಾಪಿ ಮುಷ್ಕರ ನಡೆಸುವುದಾಗಿ KSRTC ಸಾರಿಗೆ ನೌಕರರ ಸಂಘಟನೆ ಮುಖಂಡರು ತಿಳಿಸಿದ್ದಾರೆ. 6ನೇ ವೇತನ ಆಯೋಗದ ಮಾದರಿಯಲ್ಲಿ ಶಿಫಾರಸ್ಸು ಮಾಡಿ ಜಾರಿಗೊಳಿಸದೇ ಇರುವುದು, ಕೋವಿಡ್‌ನಿಂದ ಮೃತಪಟ್ಟ ನೌಕರರ ಕುಟುಂಬಸ್ಥರಿಗೆ ಪರಿಹಾರ ನೀಡದಿರುವುದು KSRTC ನೌಕರರ ಬೇಡಿಕೆಯಾಗಿದೆ.