ಮತ್ತೆ ರೆಪೊ ದರ ಹೆಚ್ಚಳ

ಡಿ. 7ರಂದು ಪ್ರಕಟಿಸಿದ್ದ ಹಣಕಾಸು ನೀತಿಯಲ್ಲಿ ಆರ್ಬಿಐ ರೆಪೊ ದರವನ್ನು 35 ಮೂಲಾಂಶ ಹೆಚ್ಚಿಸಿದೆ. ಈ ಮೂಲಕ ರೆಪೊ ದರ ಹೆಚ್ಚಳದ ವೇಗವನ್ನು ಕಡಿಮೆ ಮಾಡಿತ್ತು. ಇದರೊಂದಿಗೆ ಸತತ ಐದು ಬಾರಿ ಆರ್ಬಿಐ ರೆಪೊ ದರ ಹೆಚ್ಚಿಸಿದಂತಾಗಿದ್ದು, ರೆಪೊ ದರ ಪ್ರಮಾಣ ಶೇಕಡಾ 6.25 ಆಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಹಣದುಬ್ಬರ ಶೇಕಡಾ 6.7ರಷ್ಟು ಇರಲಿದೆ ಎಂದು ಆರ್ಬಿಐ ತಿಳಿಸಿತ್ತು. ಫೆಬ್ರವರಿಯಲ್ಲಿ ಮತ್ತೆ ಆರ್ಬಿಐ ಹಣಕಾಸು ನೀತಿ ಸಮಿತಿ ರೆಪೊ ದರ ಹೆಚ್ಚಿಸುವ ಸಾಧ್ಯತೆ ಇದೆ ಎಂದು ಕೆಲವು ಮಂದಿ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.