ಮತ್ತೆ ಸಿಎನ್‌ಜಿ ದರ ಏರಿಕೆ

ಮತ್ತೆ ಸಿಎನ್‌ಜಿ ದರ ಏರಿಕೆ

ದೇಶದ ರಾಜಧಾನಿ ಸಿಎನ್‌ಜಿ ಬೆಲೆಯನ್ನು ಮತ್ತೆ ಏರಿಕೆ ಮಾಡಲಾಗಿದೆ. ನವದೆಹಲಿಯಲ್ಲಿ ಸಿಎನ್‌ಜಿ ದರವು ಸುಮಾರು 95 ಪೈಸೆ ಏರಿಕೆಯಾಗಿದೆ. ಇದರಿಂದಾಗಿ ದರವು ಪ್ರತಿ ಕೆಜಿ ಸಿಎನ್‌ಜಿಗೆ 79.56 ರೂಪಾಯಿಗೆ ಏರಿದೆ. ನೂತನ ದರವು ಶನಿವಾರ ಮುಂಜಾನೆ 6 ಗಂಟೆಯಿಂದಲೇ ಜಾರಿಗೆ ಬಂದಿದೆ. ಈ ಹಿಂದೆ ಅಕ್ಟೋಬರ್ 8ರಂದು ದೆಹಲಿಯಲ್ಲಿ ಸಿಎನ್‌ಜಿ ದರವನ್ನು ಪ್ರತಿ ಕೆಜಿಗೆ ಮೂರು ರೂಪಾಯಿ ಹೆಚ್ಚಳ ಮಾಡಲಾಗಿದೆ. ಅದಕ್ಕೂ ಮುನ್ನ ಹಲವಾರು ಬಾರಿ ಬೆಲೆ ಏರಿಕೆ ಮಾಡಲಾಗಿದೆ.