ಮತ್ತೆ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದ ಶಿಲ್ಪಾ ಶೆಟ್ಟಿ
1998ರಲ್ಲಿ ರವಿಚಂದ್ರನ್ ನಟಿಸಿರುವ 'ಪ್ರೀತ್ಸೋದ್ ತಪ್ಪಾ' ಚಿತ್ರದಲ್ಲಿ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ಶಿಲ್ಪಾ ಶೆಟ್ಟಿ ಮೊದಲ ಬಾರಿಗೆ ಕನ್ನಡ ಚಿತ್ರರಂಗ ಪ್ರವೇಶಿಸಿದ್ದರು. ಇದೀಗ 'ಕೆಡಿ' ಚಿತ್ರದಲ್ಲಿ ರವಿಚಂದ್ರನ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಕ್ರೈಂ, ಆಯಕ್ಷನ್ ಡ್ರಾಮಾ ಕಥಾಹಂದರವುಳ್ಳ ಈ ಚಿತ್ರದ ಟೈಟಲ್ ಟೀಸರ್ ಕೂಡ ಸಿನಿ ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಈ ಚಿತ್ರ ʼಕೆವಿಎನ್ ಪ್ರೊಡಕ್ಷನ್ಸ್ʼ ಬ್ಯಾನರ್‌ನಡಿ ನಿರ್ಮಾಣವಾಗುತ್ತಿದ್ದು, ʼಕೆಡಿʼ ಸಿನಿಮಾದ ಚಿತ್ರೀಕರಣ ಕಳೆದ ಫೆಬ್ರವರಿಯಲ್ಲಿ ಆರಂಭವಾಗಿದೆ.
ಬಾಲಿವುಡ್‌ನ ಖ್ಯಾತ ನಟ ಸಂಜಯ್ ದತ್ ಕೂಡ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ನಟಿಸುತ್ತಿದ್ದು, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಸಂಗೀತ ಸಂಯೋಜನೆಯನ್ನು ಮಾಡಲಿದ್ದಾರಂತೆ. ಈ ʼಕೆಡಿʼ ಸಿನಿಮಾದ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಶಿಲ್ಪಾ ಶೆಟ್ಟಿ ಪಾತ್ರದ ಫಸ್ಟ್‌ಲುಕ್ ಗೆ ಅಭಿಮಾನಿಗಳು ಫಿದಾ ಆಗದ್ದಾರೆ.ಯುಗಾದಿ ಹಬ್ಬದ ಪ್ರಯುಕ್ತ ಬುಧವಾರ ತಮ್ಮ ಟ್ವಿಟರ್ ಖಾತೆಯಲ್ಲಿ ಶಿಲ್ಪಾ ಶೆಟ್ಟಿಯವರ ಪಾತ್ರದ ಫಸ್ಟ್‌ಲುಕ್ ಪೋಸ್ಟರ್ ಬಿಡುಗಡೆ ಮಾಡಿರುವ ಪ್ರೇಮ್, ಸ್ಟಾರ್ ನಟಿಗೆ ಸ್ವಾಗತ ಕೋರಿದ್ದಾರೆ. ಚಿತ್ರದಲ್ಲಿ ಶಿಲ್ಪಾ ಶೆಟ್ಟಿ, ʼಸತ್ಯವತಿʼ ಎಂಬ ಪಾತ್ರದಲ್ಲಿ ನಟಿಸಲಿದ್ದಾರೆ. 'ಕೆಜಿಎಫ್' ಚಿತ್ರದ ಮೂಲಕ ರವೀನಾ ಟಂಡನ್ ಸ್ಯಾಂಡಲ್‌ವುಡ್ ಪ್ರವೇಶಿಸಿದ್ದರು. ಅದೇ ರೀತಿ ಇದೀಗ 'ಕೆಡಿ' ಚಿತ್ರದಲ್ಲಿ ʼಸತ್ಯವತಿʼಯಾಗುವ ಮೂಲಕ ಶಿಲ್ಪಾ ಶೆಟ್ಟಿ ಮತ್ತೆ ಕನ್ನಡ ಚಿತ್ರರಂಗಕ್ಕೆ ಮತ್ತೆ ಮರಳಿದ್ದಾರೆ.