ಮತ್ತೆ ಹೆಚ್ಚಲಿದೆ ವರುಣನ ಆರ್ಭಟ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

ಮತ್ತೆ ಹೆಚ್ಚಲಿದೆ ವರುಣನ ಆರ್ಭಟ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಲಿದ್ದು, 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಡಿ.8 ರಿಂದ 10ರವರೆಗೆ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಡಿ.6 ರಂದು ದ. ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಾಮರಾಜನಗರ, ಕೋಲಾರ, ರಾಮನಗರದಲ್ಲಿ ಮಳೆಯಾಗಲಿದೆ. ಡಿ.7 & 8 ರಂದು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ, ಡಿ.8 ರ ಬಳಿಕ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.