ಮತ್ತೆ ಕಾಂಗ್ರೆಸ್ ನತ್ತ ಮುಖ ಮಾಡಿದ ಮಾಜಿ ಸಚಿವ.?

ಮತ್ತೆ ಕಾಂಗ್ರೆಸ್ ನತ್ತ ಮುಖ ಮಾಡಿದ ಮಾಜಿ ಸಚಿವ.?

ಬೆಂಗಳೂರು: ಮಾಜಿ ಸಚಿವ ಎ. ಮಂಜು ಬಿಜೆಪಿಗೆ ಕೈ ಕೊಟ್ಟು ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗಲು ಮುಂದಾಗಿದ್ದಾರೆ ಎಂಬ ಮಾತು ಕೇಳಿಬರುತ್ತಿವೆ.

ಇದಕ್ಕೆ ಪೂರಕ ಎಂಬಂತೆ ಮಾಜಿ ಸಚಿವ ಎ. ಮಂಜು, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ಕೆಲವು ವರದಿಗಳ ಪ್ರಕಾರ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಮುಂಬರುವ ವಿಧಾನಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಎ. ಮಂಜು ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗಿ, ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಈ ಹಿಂದೆ ಕಾಂಗ್ರೆಸ್ ನಲ್ಲಿದ್ದ ಎ. ಮಂಜು 2019ರಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಇದೀಗ ಬಿಜೆಪಿ ಬಿಟ್ಟು ಮತ್ತೆ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ ಎನ್ನಲಾಗಿದೆ.