ಮತ್ತೊಮ್ಮೆ ಮುಖ್ಯಮಂತ್ರಿ' ಆಗುತ್ತೇನೆ : ಸಿಎಂ ಬೊಮ್ಮಾಯಿ ಹೇಳಿಕೆಗೆ `BSY' ಹೇಳಿದ್ದೇನು ಗೊತ್ತಾ?

ಬೆಂಗಳೂರು : ಮತ್ತೊಮ್ಮೆ ಮುಖ್ಯಮಂತ್ರಿ ಆಗುತ್ತೇನೆ ಎಂಬ ಸಿಎಂ ಬೊಮ್ಮಾಯಿ ಹೇಳಿಕೆಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಬೊಮ್ಮಾಯಿ ಹೇಳಿಕೆಯಲ್ಲಿ ತಪ್ಪೇನಿದೆ. ಅವರು ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಮತ್ತೊಮ್ಮೆ ಮುಖ್ಯಮಂತ್ರಿ ಆಗುತ್ತೇನೆ ಎಂದು ಸಿಎಂ ಬೊಮ್ಮಾಯಿ ಹೇಳಿಕೆಯಲ್ಲಿ ತಪ್ಪೇನಿದೆ? ಸಿಎಂ ಬೊಮ್ಮಾಯಿ ಅವರು ಒಳ್ಳೆಯ ಕೆಲಸ ಮಾಡಿದ್ದಾರೆ. ಮತ್ತೊಮ್ಮೆ ಸಿಎಂ ಆಗುತ್ತೇನೆ ಎಂದು ಹೇಳುವುದರಲ್ಲಿ ತಪ್ಪಿಲ್ಲ. ಬೊಮ್ಮಾಯಿ ಹೇಳಿಕೆಯನ್ನು ಸ್ವಾಗತಿಸುತ್ತೇನೆ ಎಂದು ತಿಳಿಸಿದ್ದಾರೆ.
ಕೆಲ ದಿನಗಳ ಹಿಂದೆ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಮುಂದಿನ ವಿಧಾನಸಭೆ ಚುಣಾವಣೆಯಲ್ಲಿ ಬಿಜೆಪಿ ಗೆದ್ದು ಅಧಿಕಾರಕ್ಕೆ ಬರಲಿದ್ದು, ಮತ್ತೊಮ್ಮೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದರು.