ಮದುವೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಯುವಕ ಕುಸಿದುಬಿದ್ದು ಸಾವು. ವಿಡಿಯೋ ವೈರಲ್

ಭೋಪಾಲ್: ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಮದುವೆ ಸಮಾರಂಭವೊಂದರಲ್ಲಿ ಡ್ಯಾನ್ಸ್ ಮಾಡುತ್ತಿದ್ದ 32 ವರ್ಷದ ಯುವಕ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ವ್ಯಕ್ತಿಗೆ ಹೃದಯ ಸ್ತಂಭನವಾಗಿದೆ ಎಂದು ವರದಿಗಳು ಹೇಳುತ್ತವೆ.
ಮದುವೆಯ ವೀಡಿಯೋದಲ್ಲಿ, ಮದುವೆ ಸಂಭ್ರಮದಲ್ಲಿ ಡ್ರಮ್ ಸದ್ದು ಜೋರಾಗಿದ್ದು, ಕೆಲವರು ಸಂಭ್ರಮದಿಂದ ಕುಣಿದು ಕುಪ್ಪಳಿಸುತ್ತಿದ್ದಾರೆ. ಈ ವೇಳೆ, ಅಭಯ್ ಕೂಡ ಅವರೊಂದಿಗೆ ಡಾನ್ಸ್ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬೀಳುವುದನ್ನು ವಿಡಿಯೋ ತೋರಿಸಿದೆ.