ಮಧ್ಯಂತರ ವರದಿ ಬಂದ ಕೂಡಲೇ ಸರ್ಕಾರಿ ನೌಕರರಿಗೆ 7 ನೇ ವೇತನ ಆಯೋಗ ಜಾರಿ : ಸಿಎಂ ಬೊಮ್ಮಾಯಿ ಹೇಳಿಕೆ

ಹುಬ್ಬಳ್ಳಿ : ರಾಜ್ಯ ಸರ್ಕಾರಿ ನೌಕರರಿಗೆ 7 ನೇ ವೇತನ ಆಯೋಗದ ವರದಿ ಸಿದ್ದಪಡಿಸುತ್ತಿದ್ದು, ಮಧ್ಯಂತರ ವರದಿ ಬಂದ ಕೂಡಲೇ ಜಾರಿಗೊಳಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರಿ ನೌಕರರಿಗೆ 7 ನೇ ವೇತನ ಆಯೋಗದ ವರದಿ ಸಿದ್ದಪಡಿಸುತ್ತಿದ್ದು, ಮಧ್ಯಂತರ ವರದಿ ಬಂದ ಕೂಡಲೇ ಜಾರಿಗೊಳಿಸಲಾಗುವುದು.
ನಾಳೆಯಿಂದ 7ನೇ ವೇತನ ಆಯೋಗದ ಶಿಫಾರಸ್ಸುಗಳ ಜಾರಿ, ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೇ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿಗೊಳಿಸುವಂತೆ ಒತ್ತಾಯಿಸಿ, ರಾಜ್ಯ ಸರ್ಕಾರಿ ನೌಕರರು ( Karnataka Government Employees ) ಮುಷ್ಕರ ನಡೆಸಲಿದ್ದಾರೆ. ಈ ಹಿನ್ನಲೆಯಲ್ಲಿ ನಾಳೆಯಿಂದ ರಾಜ್ಯಾಧ್ಯಂತ ಸರ್ಕಾರಿ ಸೇವೆಯಲ್ಲಿ ( Government Service ) ಭಾರೀ ವ್ಯತ್ತಯ ಉಂಟಾಗೋ ಸಾಧ್ಯತೆ ಇದೆ.
ನಾಳೆ 7ನೇ ವೇತನ ಆಯೋಗದ ಶಿಫಾರಸ್ಸು ಜಾರಿ, ಎನ್ ಪಿಎಸ್ ( NPS ) ರದ್ದುಗೊಳಿಸಿ ಹಳೇ ಪಿಂಚಣಿ ವ್ಯವಸ್ಥೆ ( OPS ) ಜಾರಿಗೊಳಿಸಿ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿಯ ಮುಷ್ಕರ ನಡೆಸಲಿದ್ದಾರೆ. ಈ ಮುಷ್ಕರದಲ್ಲಿ ಸಚಿವಾಲಯ ಸೇರಿ ಗ್ರಾಮ ಪಂಚಾಯ್ತಿಯಿಂದ ಹಿಡಿದು, ವಿಧಾನಸೌಧದವರೆಗಿನ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರಾಗಲಿದ್ದಾರೆ. ಈ ಹಿನ್ನಲೆಯಲ್ಲಿ ಸರ್ಕಾರಿ ಸೇವೆಗಳಲ್ಲಿ ವ್ಯತ್ಯ ಸಾಧ್ಯತೆ ಇದೆ.