ಮರಾಠಾ ಸಮುದಾಯವನ್ನು 2ಎ ಗೆ ಸೇರಿಸಲು ರವೀಂದ್ರ ಸ್ವಾಮಿ ಒತ್ತಾಯ

ಮರಾಠಾ ಸಮುದಾಯವನ್ನು 2ಎ ಗೆ ಸೇರಿಸಲು ರವೀಂದ್ರ ಸ್ವಾಮಿ ಒತ್ತಾಯ

ಬೀದರ: ಅ.17: ಬಿಜೆಪಿ ಅಧಿಕಾರಕ್ಕೆ ಬಂದ 24 ಗಂಟೆಯೊಳಗಾಗಿ ಮರಾಠಾ ಸಮುದಾಯವನ್ನು 2ಎ ಗೆ ಸೇರ್ಪಡೆ ಮಾಡುತ್ತೇವೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಘೋಷಿಸಿ ಮಾತು ಕೊಟ್ಟಿದ್ದರು. ಆದರೆ ಮರಾಠಾ ಸಮುದಾಯದ ಬಹುದಿನಗಳ ಬೇಡಿಕೆ ಇದುವರೆಗೂ ಈಡೇರದಿರುವುದು ವಿಷಾದನೀಯ. ಕೂಡಲೇ ಮರಾಠಾ ಸಮುದಾಯವನ್ನು 2ಎ ಗೆ ಸೇರಿಸಬೇಕೆಂದು ಏಕತಾ ಫೌಂಡೇಶನ್ ಅಧ್ಯಕ್ಷರಾದ ಶ್ರೀ ರವೀಂದ್ರ ಸ್ವಾಮಿಯವರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿರುವುದು ಸ್ವಾಗತಾರ್ಹ ಕಾರ್ಯ. ಆದರೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಘೋಷಣೆ ಇದುವರೆಗೂ ಈಡೇರದೇ ಇರುವುದು ಮರಾಠಾ ಸಮುದಾಯಕ್ಕೆ ನೋವುಂಟು ಮಾಡಿದೆ. ಮರಾಠಾ ಸಮುದಾಯ ತನ್ನದೇ ಆದ ಪ್ರಬಲ ಶಕ್ತಿಯನ್ನು ಹೊಂದಿದೆ. ಸಾವಿರಾರು ಸಂಖ್ಯೆಯಲ್ಲಿರುವ ಮರಾಠಾ ಸಮುದಾಯದ ಜನಾಂಗ ಅಭಿವೃದ್ಧಿ ಪಥದತ್ತ ಸಾಗಬೇಕಾಗಿದೆ. ಶೈಕ್ಷಣಿಕ, ಆರ್ಥಿಕ ಮತ್ತು ಔದ್ಯೋಗಿಕ ಕ್ಷೇತ್ರದಲ್ಲಿ ಮರಾಠಾ ಸಮುದಾಯ ಹಿಂದುಳಿದಿದ್ದು, ಜಿಲ್ಲೆಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಈ ಕುರಿತು ಕೂಲಂಕುಶವಾಗಿ ಪರಿಶೀಲಿಸಿ, ಸಮುದಾಯದ ಬಗ್ಗೆ ವಿಶೇಷ ಕಾಳಜಿ ವಹಿಸಿ, ಸಮುದಾಯದ ಬಹುದಿನಗಳ ಬೇಡಿಕೆಯಾದ 2ಎ ಮೀಸಲಾತಿಯನ್ನು ಕೂಡಲೇ ಘೋಷಣೆ ಮಾಡಿ ಅನುಕೂಲ ಮಾಡಿಕೊಡಬೇಕೆಂದು ಏಕತಾ ಫೌಂಡೇಶನ್ ಅಧ್ಯಕ್ಷರಾದ ರವೀಂದ್ರ ಸ್ವಾಮಿಯವರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.