ಮರಾಠಿ ಇಂಡಸ್ಟ್ರಿಗೆ ಕಾಲಿಟ್ಟ ಮೇಘಾ ಶೆಟ್ಟಿ

ಸ್ಟಾರ್ ಗಣೇಶ್ ಅಭಿನಯದ ತ್ರಿಬಲ್ ರೈಡಿಂಗ್ ಚಿತ್ರ ರಿಲೀಸ್ ಆಗಿದೆ. ಡಾರ್ಲಿಂಗ್ ಕೃಷ್ಣ ಅಭಿನಯದ ದಿಲ್ಪಸಂದ್ ಚಿತ್ರವೂ ಇತ್ತೀಚಿಗೆ ತೆರೆ ಕಂಡಿದೆ. ಇನ್ನು ಮೇಘಾ ಶೆಟ್ಟಿ ಅಭಿನಯದ "ಆಪರೇಷನ್ ಲಂಡನ್ ಕೆಫೆ" ಬಹು ಭಾಷೆಯಲ್ಲಿ ರಿಲೀಸ್ ಆಗುತ್ತಿದೆ. ಈ ಚಿತ್ರದ ಮೂಲಕ ಮೇಘಾ ಶೆಟ್ಟಿ ಮರಾಠಿ ಇಂಡಸ್ಟ್ರೀಗೂ ಕಾಲಿಡುತ್ತಿದ್ದಾರೆ. ಈ ಚಿತ್ರ ಕನ್ನಡ, ಮರಾಠಿ, ಹಿಂದಿ, ತಮಿಳು, ತೆಲುಗು, ಮಲೆಯಾಳಂ ಭಾಷೆಯಲ್ಲೂ ರಿಲೀಸ್ ಆಗುತ್ತಿದೆ. ಹೀಗೆ ಮೇಘಾ ಶೆಟ್ಟಿ ಬೆಳ್ಳಿ ತೆರೆ ಮೇಲೆ ಮಿಂಚುತ್ತಲೇ ಇದ್ದಾರೆ.