ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಪ್ರಲ್ಹಾದ ಜೋಶಿ ಕಿಡಿ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇತ್ತೀಚಿಗೆ ರಾಜಸ್ಥಾನದಲ್ಲಿ ಭಾಷಣದ ವೇಳೆ ಬಿಜೆಪಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಖಂಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ಪ್ರತಿಕ್ರಿಯೆ ನೀಡಿರುವ ಅವರು,ನಮಗೆಲ್ಲ ಗೊತ್ತು, ಮಲ್ಲಿಕಾರ್ಜುನ ಖರ್ಗೆ ಹಿರಿಯ ನಾಯಕರು, ನಾವು ಅವರಿಂದ ಇಂತಹ ಭಾಷೆಯನ್ನು ನಿರೀಕ್ಷಿಸಿರಲಿಲ್ಲ ಎಂದಿದ್ದಾರೆ. ದೇಶಕ್ಕಾಗಿ ಬಿಜೆಪಿಯು ಒಂದು ನಾಯಿಯನ್ನೂ ಕಳೆದುಕೊಂಡಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದರು