ಮಲ್ಲಿಕಾರ್ಜುನ ಖರ್ಗೆಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ

ನವದೆಹಲಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನೆಗಳು.
ಪಕ್ಷದ ಆಂತರಿಕ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ 7,897 ಮತಗಳನ್ನು ಪಡೆದು ಆಯ್ಕೆಯಾದರು. ಇವರ ಎದುರು ಸ್ಪರ್ಧೆ ಮಾಡಿದ್ದ ಶಶಿ ತರೂರ್ 1072 ಮತಗಳನ್ನು ಪಡೆದು ಪರಾಭವಗೊಂಡರು.
ಮಲ್ಲಿಕಾರ್ಜುನ ಖರ್ಗೆ ಅವರು ಅಕ್ಟೋಬರ್ 26ರಂದು ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು
ರಬ್ಬರ್ ಸ್ಟ್ಯಾಂಪ್- ಆರೋಪ: 'ಸದೃಢ ಪ್ರಜಾಪ್ರಭುತ್ವಕ್ಕೆ ಪ್ರಬಲ ವಿರೋಧ ಪಕ್ಷದ ಅಗತ್ಯವಿದೆ. ಸುದೀರ್ಘಾವಧಿಯ ನಂತರ ಕಾಂಗ್ರೆಸ್ ಪಕ್ಷವು ತನ್ನ ಕುಟುಂಬದರನ್ನು ಹೊರತುಪಡಿಸಿ, ತಮ್ಮ ರಬ್ಬರ್ ಸ್ಟ್ಯಾಂಪ್ ರೀತಿ ಇರುವವರನ್ನು ಅಧ್ಯಕ್ಷರಾನ್ನಾಗಿ ನೇಮಿಸಿದೆ. ಆಂತರಿಕ ಚುನಾವಣೆ ಎಂಬುದು ಬರೀ ನಾಟಕ' ಎಂದು ರಾಜಸ್ಥಾನದ ಬಿಜೆಪಿ ಮುಖಂಡ ರಾಜ್ಯವರ್ಧನ್ ರಾಥೋಡ್ ಆರೋಪಿಸಿದ್ದಾರೆ.