ಮಳೆ ಹಾನಿ ಕುರಿತು ಸರ್ಕಾರಕ್ಕೆ ಸಿದ್ದರಾಮಯ್ಯ ತರಾಟೆ

ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ಕೊಟ್ಟಿದ್ದರೂ ರಾಜ್ಯ ಸರ್ಕಾರ ಯಾವುದೇ ಪೂರ್ವ ಸಿದ್ದತೆಗಳನ್ನು ಕೈಗೊಳ್ಳಲಿಲ್ಲ ಏಕೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ರಾಜ್ಯದಲ್ಲಿ ಅತಿವೃಷ್ಟಿ ಕುರಿತಂತೆ ನಿಯಮ 69ರಡಿ ಮಾತನಾಡಿದ ಅವರು, ಈ ಬಾರಿ ಮಳೆಗಾಲದಲ್ಲಿ ಕಳೆದ ಬಾರಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಲ್ಲ ರಾಜ್ಯಗಳಿಗೆ ಮುನ್ಸೂಚನೆ ಕೊಟ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸೂಚನೆ ಕೊಟ್ಟಿತ್ತು. ಆದರೂ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೆ ಇರುವುದರಿಂದ ಇಷ್ಟು ದೊಡ್ಡ ಮಟ್ಟದ ಅನಾಹುತ ಸಂಭವಿಸಿದೆ ಎಂದು ವಾಗ್ದಾಳಿ ನಡೆಸಿದರು.