ಮಳೆ ಹಾನಿ ಪರಿಹಾರಕ್ಕೆ 124 ಕೋಟಿ ರೂ. ಬಿಡುಗಡೆ

ಬೆಂಗಳೂರು,ಅ.14- ರಾಜ್ಯದ ವಿವಿಧೆಡೆ ಸುರಿದ ಮಹಾಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ತಕ್ಷಣ 124 ಕೋಟಿ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲೆಡೆ ಕಳೆದ ನಾಲ್ಕೈದು ದಿನಗಳಿಂದ ನಿರಂತರವಾಗಿ ಮಳೆ ಯಾಗುತ್ತಿದ್ದು, ಕೆಲವೆಡೆ ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿದೆ. ತಕ್ಷಣವೇ ಮೂಲ ಭೂತ ಸೌಕರ್ಯ ಕಲ್ಪಿಸಲು 124 ಕೋಟಿ ರೂ. ಅನುದಾನ ಬಿಡುಗಡೆ ಮಾಡಿರುವುದಾಗಿ ತಿಳಿಸಿದರು.
ಈ ಹಿಂದೆ ಮೈಸೂರು ಮತ್ತು ಹಾವೇರಿ ಜಿಲ್ಲೆಗೆ ಹಣವನ್ನು ಬಿಡುಗಡೆ ಮಾಡಿದ್ದೇವೆ. ಈಗ ಯಾವ ಯಾವ ಜಿಲ್ಲೆಗಳಲ್ಲಿ ಹೆಚ್ಚು ಹಾನಿಯಾಗಿದೆಯೋ ಅಂತಹ ಕಡೆ ಪರಿಹಾರ ಕಲ್ಪಿಸಲು ಅ„ಕಾರಿಗಳೀಗೆ ಸೂಚಿಸಲಾಗಿದೆ. ಹಿಂದೆ ಪಿಡಿಎಪ್ ಹಣದಲ್ಲಿ ಪರಿಹಾರ ಕಾರ್ಯಗಳನ್ನು ತಕ್ಷಣವೇ ಕೈಗೊಳ್ಳಲು ಜಿಲ್ಲಾ„ಕಾರಿಗಳಿಗೆ ಸೂಚಿಸಿದ್ದೇವೆ ಹಣದ ಬಗ್ಗೆ ತಲೆಕೆಡಿಸಿ ಕೊಳ್ಳದೆ ಡಿಸಿಗಳ ಖಾತೆಯಲ್ಲಿರುವ ಹಣವನ್ನು ಬಳಸಿಕೊಳ್ಳಲು ಸೂಚಿಸಲಾಗಿದೆ.
ಅ„ಕಾರಿಗಳು ಜಿಲ್ಲಾಕೇಂದ್ರಗಳಲ್ಲಿ ಕೂರದೆ ಸ್ಥಳಕ್ಕೆ ತೆರಳಬೇಕು. ಪರಿಶೀಲನೆ ನಡೆಸಿ ಪರಿಹಾರ ಕಾರ್ಯ ಕೈಗೊಳ್ಳಬೇಕು. ಸಕಾರಣಗಳನ್ನು ನೀಡದೆ ಪರಿಹಾರ ನೀಡುವಲ್ಲಿ ವಿಳಂಬ ಮಾಡಿದರೆ ಶಿಸ್ತುಕ್ರಮ ತೆಗೆದುಕೊಳ್ಳುವುದಾಗಿ ಹೇಳಿದರು.