ಮಹಾರಾಷ್ಟ್ರ ಗವರ್ನರ್ ಭಗತ್ ಸಿಂಗ್ ಕೊಶ್ಯಾರಿ ಅವರಿಗೆ ಕೋವಿಡ್-19 ಪಾಸಿಟಿವ್

ಮಹಾರಾಷ್ಟ್ರ ಗವರ್ನರ್ ಭಗತ್ ಸಿಂಗ್ ಕೊಶ್ಯಾರಿ ಅವರಿಗೆ ಕೋವಿಡ್-19 ಪಾಸಿಟಿವ್

ಮುಂಬೈ: ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ಬುಧವಾರ ದೃಢಪಟ್ಟಿದೆ.

'ವೈರಸ್‌ಗೆ ಧನಾತ್ಮಕ ಪರೀಕ್ಷೆ ನಡೆಸಿದ ನಂತರ ಅವರನ್ನು ದಕ್ಷಿಣ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ' ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಯಾವಾಗಲೂ ಮುಖಕ್ಕೆ ಮಾಸ್ಕ್ ಧರಿಸಿ ಕಾಣಿಸಿಕೊಳ್ಳುತ್ತಿದ್ದ ಕೊಶ್ಯಾರಿ (80) ಅವರನ್ನು ಮುಂಬೈನ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.