ಮಹಾರಾಷ್ಟ್ರದಲ್ಲಿ ಕೋವಿಡ್ ಹೆಚ್ಚಳ ; 24 ಗಂಟೆಗಳಲ್ಲಿ 711 ಪ್ರಕರಗಳು ದಾಖಲು, 4 ಮಂದಿ ಸಾವು
ಮಹಾರಾಷ್ಟ್ರ: ಕಳೆದ ಕೆಲ ತಿಂಗಳಿಂದ ದೇಶಾದ್ಯಂತ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿವೆ. ಅಂತೆಯೇ ನೆರೆಯ ಮಹಾರಾಷ್ಟ್ರದಲ್ಲಿ ಅಧಿಕ ಕೊರೊನಾ ಕೇಸ್ ಗಳು ವರದಿಯಾಗಿವೆ.
ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ 711 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ.
ಕಳೆದ ಏಳು ದಿನಗಳಲ್ಲಿ ರಾಜ್ಯದಲ್ಲಿ 11 ಸಾವುಗಳು ಸಂಭವಿಸಿವೆ. ರಾಜ್ಯದಲ್ಲಿ ಸಾವಿನ ಪ್ರಮಾಣವು ಪ್ರಸ್ತುತ ಶೇಕಡಾ 1.82 ರಷ್ಟಿದೆ ಎಂದು ತಿಳಿದು ಬಂದಿದೆ.
ಕೋವಿಡ್ ಪ್ರಕರಣದ ಉಲ್ಬಣದ ಹಿನ್ನೆಲೆಯಲ್ಲಿ. ಮುಂದಿನ ವಾರ (ಏಪ್ರಿಲ್ 13 ಮತ್ತು 14) ರಾಜ್ಯದಲ್ಲಿ ಅಣಕು ಡ್ರಿಲ್ ನಡೆಸಲಾಗುವುದು ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ತಾನಾಜಿ ಸಾವಂತ್ ತಿಳಿಸಿದ್ದಾರೆ.