ಮಹಾರಾಷ್ಟ್ರದಲ್ಲಿ `ಒಮಿಕ್ರೋನ್ ಹೊಸ ತಳಿ ಪತ್ತೆ : ಕರ್ನಾಟಕದಲ್ಲಿ ದೀಪಾವಳಿ, ಕನ್ನಡ ರಾಜ್ಯೋತ್ಸವಕ್ಕೆ ಮಾರ್ಗಸೂಚಿ ಪ್ರಕಟ

ಮಹಾರಾಷ್ಟ್ರದಲ್ಲಿ `ಒಮಿಕ್ರೋನ್ ಹೊಸ ತಳಿ ಪತ್ತೆ : ಕರ್ನಾಟಕದಲ್ಲಿ ದೀಪಾವಳಿ, ಕನ್ನಡ ರಾಜ್ಯೋತ್ಸವಕ್ಕೆ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಕೋವಿಡ್-19ರ  ಬಿಎ.2.75 ಹಾಗೂ ಬಿಜೆ.1ನ ಓಮಿಕ್ರಾನ್ಹೊಸ ಉಪ ರೂಪಾಂತರ ತಳಿ ಮಹಾರಾಷ್ಟ್ರದಲ್ಲಿ ಕಾಣಿಸಿಕೊಂಡಿದೆ. ಹೀಗಾಗಿ ರಾಜ್ಯದಲ್ಲಿ ದೀಪಾವಳಿ ಹಬ್ಬ  ಹಾಗೂ ನವೆಂಬರ್ 1ರ ಕನ್ನಡ ರಾಜ್ಯೋತ್ಸವಕ್ಕೆಮುನ್ನೆಚ್ಚರಿಕೆ ಕ್ರಮವಾಗಿ ಮಾರ್ಗಸೂಚಿ ಕ್ರಮಗಳನ್ನು ರಾಜ್ಯ ಸರ್ಕಾರ ಕಟಿಸಿದೆ.

ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಮಾರ್ಗಸೂಚಿ ಕ್ರಮಗಳನ್ನು ಪ್ರಕಟಿಸಿದ್ದಾರೆ. ನೆರೆಯ ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ಹೊಸ ಉಪ ರೂಪಾಂತರಿ ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ದೀಪಾವಳಿ ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ಸಾರ್ವಜನಕಿರು ಗುಂಪು ಸೇರುವ ಸಾಧ್ಯತೆಗಳು ಅಧಿಕವಾಗಿರುವುದರಿಂದ, ಈ ಕೆಳಕಂಡ ಮಾರ್ಗಸೂಚಿ ಕ್ರಮಗಳನ್ನು ಪಾಲಿಸುವಂತೆ ತಿಳಿಸಿದ್ದಾರೆ.

ಹೀಗೆವೆ ದೀಪಾವಳಿ ಹಾಗೂ ಕನ್ನಡ ರಾಜ್ಯೋತ್ಸವಕ್ಕೆ ಮಾರ್ಗಸೂಚಿ ಕ್ರಮಗಳು

  • ಜ್ವರ, ಕೆಮ್ಮು, ನೆಗಡಿ, ಗಂಟಲು ಕೆರೆತ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರು ಕಡ್ಡಾಯವಾಗಿ ಕೋವಿಡ್ 19 ಪರೀಕ್ಷೆಗೆ ಒಳಗಾಗುವಂತೆ ತಿಳಿಸಿದೆ.
  • ಕೋವಿಡ್ ಪರೀಕ್ಷೆಗೆ ಒಳಗಾದವರು ಕಡ್ಡಾಯವಾಗಿ ಪ್ರತ್ಯೇಕವಾಗಿ ಮನೆಯಲ್ಲಿ ಸ್ವಯಂ ಪ್ರೇರಿತವಾಗಿ ಇರುವಂತೆ ಸೂಚಿಸಿದೆ.
  • ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರು ಶೀಘ್ರವಾಗಿ ಹತ್ತಿರದ ಆಸ್ಪತ್ರೆಗೆ ತೆರಳಿ, ವೈದ್ಯಕೀಯ ಆರೈಕೆಯನ್ನು ಪಡೆಯುವಂತೆ ತಿಳಿಸಿದೆ.
  • ಏರ್ ಕಂಡೀಷನ್ ವ್ಯವಸ್ಥೆ ಇರುವ ಒಳಾಂಗಣಗಳು, ಅಗತ್ಯ ಗಾಳಿ ಬೆಳಕಿಲ್ಲದಿರುವ ಸ್ಥಳಗಳು, ಮುಚ್ಚಿದ ಸಂರಕ್ಷಣೆಯ ಜನಸಂದಣಿಯ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚಿಸಲಾಗಿದೆ.
  • ಹಬ್ಬಗಳನ್ನು ಸಾಧ್ಯವಾದಷ್ಟು ಹೊರಾಂಗಣದಲ್ಲಿ ಆಚರಿಸುವುದು. ಜನ ದಟ್ಟಣೆಯ ಪ್ರದೇಶಗಳಿಂದ ದೂರವಿರುವಂತೆ ತಿಳಿಸಿದೆ.
  • ಕೋವಿಡ್19 ಲಸಿಕೆಯ ಬೂಸ್ಟರ್, ಮುಂಜಾಗ್ರತಾ ಡೋಸ್ ಲಸಿಕೆ ಬಾಕಿ ಇರುವವರು ಕೂಡಲೇ ಬಡೆಯುವಂತೆ ತಿಳಿಸಿದೆ.
  • ಸಾರ್ವಜನಿಕರ ಆರೋಗ್ಯ ಹಾಗೂ ಸುರಕ್ಷತೆಯ ದೃಷ್ಠಿಯಿಂದ ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಬಳಸುವಂತೆ ಸೂಚಿಸಿದೆ.
  • ಸಾರ್ವಜನಿಕ ಸ್ಥಳಗಳಲ್ಲಿ ಮೂಗನ್ನು ಶುಚಿಗೊಳಿಸದಿರುವುದು ಹಾಗೂ ಉಗುಳುವುದಿರುವುದು, ಕೈಗಳನ್ನು ಸೋಪ್ ಹಾಗೂ ನೀರಿನಿಂದ ತೊಳೆಯವುದು.
  • ಸೋಂಕಿನ ಲಕ್ಷಣಗಳನ್ನು ಹೊಂದಿದವರ ಸಂಪರ್ಕದಿಂದ ದೂರವಿರುವಂತೆ ತಿಳಿಸಿದೆ.

ವರದಿ: ವಸಂತ ಬಿ ಈಶ್ವರಗೆರೆ