ಮಹಿಳಾ ಟಿ20 ವಿಶ್ವಕಪ್ ; ಪಾಕ್ ವಿರುದ್ಧದ ಆರಂಭಿಕ ಪಂದ್ಯದಿಂದ ಹೊರಗುಳಿದ 'ಸ್ಮೃತಿ ಮಂದಾನ

ನವದೆಹಲಿ : ಭಾರತೀಯ ಮಹಿಳಾ ಕ್ರಿಕೆಟ್ ಉಪನಾಯಕಿ ಸ್ಮೃತಿ ಮಂದಾನ ಅವರ ಭಾರತ ಮಹಿಳಾ ಟಿ20 ವಿಶ್ವಕಪ್‌ನ ಪಾಕಿಸ್ತಾನ ವಿರುದ್ಧದ ಆರಂಭಿಕ ಪಂದ್ಯದಿಂದ ಹೊರಗುಳಿದಿದ್ದಾರೆ ಎಂದು ಮೂಲಗಳು ತಿಲಿಸಿವೆ.
ಫೆ. 12ರಂದು ಕೇಪ್ ಟೌನ್‌ನಲ್ಲಿ ನಡೆಯುವ ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೂ ಮುನ್ನ ಎಡಗೈ ಬ್ಯಾಟರ್ ಬೆರಳಿಗೆ ಗಾಯ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಭಾರತೀಯ ಮಹಿಳಾ ತಂಡದ ಶಿಬಿರದಿಂದ ಸ್ಮೃತಿ ಮಂದಾನ ಗಾಯದ ಬಗ್ಗೆ ಅಧಿಕೃತ ಮಾಹಿತಿ ಬಂದಿಲ್ಲವಾದರೂ, ಬಾಂಗ್ಲಾದೇಶ ವಿರುದ್ಧದ ಭಾರತದ ಕೊನೆಯ ಅಭ್ಯಾಸ ಪಂದ್ಯದಲ್ಲಿ ಆರಂಭಿಕ ಆಟಗಾರ್ತಿ ಬ್ಯಾಟಿಂಗ್ ಮಾಡಿರಲಿಲ್ಲ.