ಮಹೇಂದ್ರ ಸಿಂಗ್ ಧೋನಿಯ IPL ವಿದಾಯ ಪಂದ್ಯಕ್ಕೆ ಡೇಟ್‌ ಫಿಕ್ಸ್‌

ಮಹೇಂದ್ರ ಸಿಂಗ್ ಧೋನಿಯ IPL ವಿದಾಯ ಪಂದ್ಯಕ್ಕೆ ಡೇಟ್‌ ಫಿಕ್ಸ್‌

ನ್ನೈ: ಬಿಸಿಸಿಐ ಐಪಿಎಲ್ 2023ರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಇದರೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ವಿದಾಯ ಪಂದ್ಯದ ದಿನಾಂಕವೂ ಬಹಿರಂಗವಾಗಿದೆ. ಮೇ 14 ರಂದು, ಕ್ಯಾಪ್ಟನ್ ಕೂಲ್ ಕೊನೆಯ ಬಾರಿಗೆ ಚೆನ್ನೈ ಸೂಪರ್ ಕಿಂಗ್ಸ್ ಜರ್ಸಿಯಲ್ಲಿ ಕಾಣಿಸಿಕೊಳ್ಳಬಹುದು.

ಮೇ 14 ರಂದು ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೆಣಸಲಿದೆ.

ಮೇ 14 ರಂದು ಧೋನಿ ತಮ್ಮ ಕೊನೆಯ ಐಪಿಎಲ್ ಪಂದ್ಯವನ್ನು ಆಡಲಿದ್ದಾರೆ!

ಇದು ಮಹೇಂದ್ರ ಸಿಂಗ್ ಧೋನಿ ಅವರ ಕೊನೆಯ ಪಂದ್ಯವಾಗಿರಬಹುದು. ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಆಫ್‌ಗೆ ಅರ್ಹತೆ ಪಡೆಯಲು ವಿಫಲವಾದರೆ, ಮಹೇಂದ್ರ ಸಿಂಗ್ ಧೋನಿ ಮೇ 14 ರಂದು ತಮ್ಮ ವೃತ್ತಿಜೀವನದ ಕೊನೆಯ ಪಂದ್ಯವನ್ನು ಆಡಲಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಇದು ಮಹೇಂದ್ರ ಸಿಂಗ್ ಧೋನಿ ಅವರ ಕೊನೆಯ ಐಪಿಎಲ್ ಸೀಸನ್. ಆದರೆ, ಧೋನಿ ಈ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. ಧೋನಿ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಇದುವರೆಗೆ 4 ಬಾರಿ ಪ್ರಶಸ್ತಿ ಗೆದ್ದುಕೊಂಡಿದೆ.

ಚೆನ್ನೈ ಸೂಪರ್ ಕಿಂಗ್ಸ್‌ನ ಮುಂದಿನ ನಾಯಕತ್ವದ ರೇಸ್‌ನಲ್ಲಿ ಇಂಗ್ಲೆಂಡ್‌ನ ಬೆನ್ ಸ್ಟೋಕ್ಸ್ ಹೊರತುಪಡಿಸಿ, ಅಜಿಂಕ್ಯ ರಹಾನೆ ಮತ್ತು ರಿತುರಾಜ್ ಗಾಯಕ್ವಾಡ್ ಹೆಸರುಗಳು ಮುಂದಿವೆ. ಚೆನ್ನೈ ಸೂಪರ್ ಕಿಂಗ್ಸ್‌ನ ಮುಂದಿನ ನಾಯಕನಾಗಲು ಬೆನ್ ಸ್ಟೋಕ್ಸ್ ಪ್ರಬಲ ಸ್ಪರ್ಧಿ ಎಂದು ಪರಿಗಣಿಸಲಾಗಿದೆ.