ಮಾ. 25ರಂದು ದಾವಣಗೆರೆಗೆ ಪ್ರಧಾನಿ ಮೋದಿ : ಬಿಜೆಪಿ ರಥಯಾತ್ರೆ ಸಮಾರೋಪದಲ್ಲಿ ಭಾಗಿ

ಮಾ. 25ರಂದು ದಾವಣಗೆರೆಗೆ ಪ್ರಧಾನಿ ಮೋದಿ : ಬಿಜೆಪಿ ರಥಯಾತ್ರೆ ಸಮಾರೋಪದಲ್ಲಿ ಭಾಗಿ

ದಾವಣಗೆರೆ : ರಾಜ್ಯ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ರಾಜ್ಯ ಬಿಜೆಪಿ ಇದೀಗ ಮಾರ್ಚ್ 25 ರಂದು ದಾವಣಗೆರೆಯಲ್ಲಿ ನಡೆಯಲಿರುವ ಬಿಜೆಪಿ ರಥಯಾತ್ರೆಯ ಸಮಾರೋಪ ಸಮಾರಂಭಕ್ಕೆ ಪ್ರಧಾನಿ ಮೋದಿ ಅವರನ್ನು ಕರೆಸಲಿದೆ.

ಈ ಕುರಿತು ಮಾಹಿತಿ ನೀಡಿರುವ ಸಂಸದ ಜಿ.ಎಂ. ಸಿದ್ದೇಶ್ವರ್, ಮಾರ್ಚ್ 25 ರಂದು ದಾವಣಗೆರೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಬಿಜೆಪಿ ರಥಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ. ದಾವಣಗೆರೆ ಹೊರ ವಲಯದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಸಮಾರೋಪ ಸಮಾರಂಭದಲ್ಲಿ 10 ಲಕ್ಷ ಜನರು ಸೇರುವ ನಿರೀಕ್ಷೆಯಿದೆ ಎಂದರು.

ಮಾರ್ಚ್ 12 ರಂದು ಬೆಂಗಳೂರು-ಮೈಸೂರು ಜನರ ಬಹು ನಿರೀಕ್ಷೆಯ ಬೆಂಗಳೂರು- ಮೈಸೂರು ದಶಪಥ ರಸ್ತೆ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಮಾಡಲಿದ್ದಾರೆ. ಮಂಡ್ಯ ಕಾರ್ಯಕ್ರಮದ ಬಳಿಕ ಪ್ರಧಾನಿ ಮೋದಿ ಧಾರವಾಡದಲ್ಲಿ ನೂತನ ಐಐಟಿ ಕಟ್ಟಡ ಉದ್ಘಾಟಿಸಲಿದ್ದಾರೆ.