ಮಾ.1 ರಿಂದ ಕರ್ತವ್ಯಕ್ಕೆ ಗೈರಾಗಿ ಮುಷ್ಕರದಲ್ಲಿ ಭಾಗವಹಿಸಿ : ಸರ್ಕಾರಿ ನೌಕರರಿಗೆ ಸಿ.ಎಸ್ ಷಡಾಕ್ಷರಿ ಕರೆ
ಬೆಂಗಳೂರು : ಬಿಜೆಪಿ ಸರ್ಕಾರಕ್ಕೆ ಸರ್ಕಾರಿ ನೌಕರರ ಏಳನೇ ಪರಿಷ್ಕ್ರೃತ ವೇತನ ಹಾಗೂ ಹಳೆ ಪಿಂಚಣಿ ಯೋಜನೆಗಾಗಿನ ಪಟ್ಟು ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ವಿವಿಧ ಬೇಡಿಕೆಗೆ ಒತ್ತಾಯಿಸಿ ಮಾರ್ಚ್ 1 ರಿಂದ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಎಲ್ಲಾ ಇಲಾಖೆಗಳ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಭಾಗವಹಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಾಕ್ಷರಿ ಕರೆ ನೀಡಿದ್ದಾರೆ.
ಬಿಜೆಪಿ ಸರ್ಕಾರಕ್ಕೆ ಸರ್ಕಾರಿ ನೌಕರರ ಏಳನೇ ಪರಿಷ್ಕ್ರೃತ ವೇತನ ಹಾಗೂ ಹಳೆ ಪಿಂಚಣಿ ಯೋಜನೆಗಾಗಿನ ಪಟ್ಟು ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಸರ್ಕಾರಿ ನೌಕರರು ತಮ್ಮ ಪಟ್ಟು ಬಿಗಿಪಡಿಸಲು ಮುಂದಾಗಿದ್ದು, ಬೊಮ್ಮಾಯಿ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ.ನಿನ್ನೆ ನಡೆದ ಶೈಕ್ಷಣಿಕ ಕಾರ್ಯಗಾರ, ಸರ್ವ ಸದಸ್ಯರ ಮಹಾಸಭೆ ಉದ್ಘಾಟಿಸಿ ಮಾತನಾಡಿದರು. 7 ನೇ ವೇತನ ಆಯೋಗ ಜಾರಿ ಸೇರಿ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಮಾರ್ಚ್1 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಎಲ್ಲಾ ನೌಕರರು ಕರ್ತವ್ಯಕ್ಕೆ ಗೈರಾಗುವ ಮೂಲಕ ಮುಷ್ಕರದಲ್ಲಿ ಭಾಗವಹಿಸಿ ಎಂದಿದ್ದಾರೆ.
ಬಜೆಟ್ ನಲ್ಲಿ ಸಿಎಂ ಬೊಮ್ಮಾಯಿ ಅವರು ನೌಕರರ ಬಗ್ಗೆ ಉದಾಸೀನ ತೋರಿದ್ದಾರೆ. ಇದರಿಂದ 9 ಲಕ್ಷ ನೌಕರರಿಗೆ ಅನ್ಯಾಯವಾಗಿದೆ. ಇನ್ನೂ, 2 ದಿನ ಕಾಲಾವಕಾಶವಿದ್ದು, ಸರ್ಕಾರ ಸ್ಪಂದಿಸದಿದ್ದರೆ ಮುಷ್ಕರ ಅನಿವಾರ್ಯ ಎಂದು ಹೇಳಿದ್ದಾರೆ. ರಾಜ್ಯದ ಸರ್ಕಾರಿ ನೌಕರರು ಬಜೆಟ್ ನಲ್ಲಿ ಸಿಎಂ ಬೊಮ್ಮಾಯಿ ಬಂಪರ್ ನೀಡುವ ನಿರೀಕ್ಷೆಯಲ್ಲಿದ್ದರು. 7ನೇ ವೇತನ ಆಯೋಗದ ಬಗ್ಗೆ ಸಿಎಂ ಪ್ರಸ್ತಾಪಿಸುತ್ತಾರೆ ಅಂತ ಅಂದುಕೊಂಡಿದ್ದರು. ಆದರೆ ಸಿಎಂ ಬೊಮ್ಮಾಯಿ ಬಜೆಟ್ನಲ್ಲಿ ಈ ಬಗ್ಗೆ ಪ್ರಸ್ತಾಪವನ್ನೇ ಮಾಡಿಲ್ಲ.ಇದರಿಂದ ಸರ್ಕಾರಿ ನೌಕರರು ಇನ್ನಷ್ಟು ಅಸಮಾಧಾನಗೊಂಡಿದ್ದಾರೆ.