ಮಾ.1 ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ : ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಮಾ.1 ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ : ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ರಸ್ತೆ ಸಾರಿಗೆ ನೌಕರರ ಲೀಗ್ ಮಾರ್ಚ್ 1 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಮುಂದಾಗಿದೆ.

ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ್ದ ರಾಜ್ಯ ಬಜೆಟ್ ನಲ್ಲಿ ಸಾರಿಗೆ ನೌಕರರ ಬೇಡಿಕೆಗಳನ್ನು ನಿರ್ಲಕ್ಷಿಸಲಾಗಿದೆ.

ಈ ಹಿನ್ನಲೆಯಲ್ಲಿ ಮಾರ್ಚ್ 1 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆಯಲ್ಲಿ 3,000 ಕ್ಕೂ ಹೆಚ್ಚು ನೌಕರರು ಮತ್ತು ಅವರ ಕುಟುಂಬ ಸದಸ್ಯರು ಭಾಗಿಯಾಗುವ ನಿರೀಕ್ಷೆಯಿದೆ.

ಸಾರಿಗೆ ನೌಕರರ ವೇತನ ಪರಿಷ್ಕರಣೆ, 7 ನೇ ವೇತನ ಆಯೋಗಕ್ಕೆ ಪರಿಗಣನೆ, ಮುಷ್ಕರದ ಅವಧಿಯಲ್ಲಿ ವಜಾಗೊಂಡ ನೌಕರರ ಮರು ನೇಮಕ, ನೌಕರರ ಮೇಲೆ ಹಾಕಿರುವ ಎಲ್ಲಾ ಮೊಕದ್ದಮೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ.