ಮಾ.24 ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ : ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : ಸರ್ಕಾರಿ ನೌಕರರ ಮುಷ್ಕರ ಅಂತ್ಯವಾದ ಬೆನ್ನಲ್ಲೇ ಇದೀಗ ಮತ್ತೆ ಸಾರಿಗೆ ನೌಕರರು ಮುಷ್ಕರ ನಡೆಸಲು ಕರೆ ನೀಡಿದ್ದಾರೆ ಹೌದು, ಮಾರ್ಚ್ 24 ರಿಂದ ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ
ಸಾರಿಗೆ ನೌಕರರ ಪ್ರತಿಭಟನೆ ಹಿನ್ನೆಲೆ ಮಾರ್ಚ್ 24 ರಿಂದ ಸಾರಿಗೆ ಸಂಚಾರದಲ್ಲಿ ವ್ಯತ್ಯಯವಾಗಲಿದ್ದು, ಬಿಎಂಟಿಸಿ, ಕೆಎಸ್ ಆರ್ ಟಿಸಿ, ಕೆಕೆ ಆರ್ ಟಿಸಿ , ಎನ್ ಡಬ್ಲ್ಯೂ ಕೆ ಆರ್ ಟಿಸಿ ಸಿಬ್ಬಂದಿ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.
2016 ರಿಂದ ನಮ್ಮ ವೇತನ ಹೆಚ್ಚಳವಾಗಿಲ್ಲ, ಸರ್ಕಾರದ ಗಮನ ಸೆಳೆಯಲು ಮುಷ್ಕರ ಹಮ್ಮಿಕೊಂಡಿದ್ದೇವೆ ಎಂದು ಸಾರಿಗೆ ನೌಕರರ ಒಕ್ಕೂಟದ ಅಧ್ಯಕ್ಷ ಆರ್ ಚಂದ್ರಶೇಖರ್ ಅಸಮಾಧಾನ ಹೊರಹಾಕಿದರು. 2021 ರಲ್ಲಿ ಪ್ರತಿಭಟನೆ ನಡೆಸಿದ್ದೆವು, ಆದರೆ ಸಾರಿಗೆ ಸಚಿವರು ಲಿಖಿತ ಭರವಸೆ ನೀಡಿದ್ದರು. ಆದರೆ ಆ ಭರವಸೆ ಭರವಸೆಯಾಗಿಯೇ ಉಳಿದಿದೆ. ಸಾರಿಗೆ ನೌಕರರು ಆರ್ಥಿಕ ಸಂಕಷ್ಟದಲ್ಲಿದ್ದಾರೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.
ಮಾರ್ಚ್ 9ರಂದು 'ಕರ್ನಾಟಕ ಬಂದ್'ಗೆ ಕರೆ ನೀಡಿದ ಕಾಂಗ್ರೆಸ್
ತುಮಕೂರು: ಮಾರ್ಚ್ ರಂದು ಕರ್ನಾಟಕದಾದ್ಯಂತ ಬಂದ್ಗೆ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರು ಕರೆ ನೀಡಿದ್ದಾರೆ. ಅವರು ಇಂದು ಕೊರಟಗೆರೆಯಲ್ಲಿ ನಡೆದ ಪಾರ್ಟಿ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಮಾರ್ಚ್ 9ರಂದು ಬೆಳಗ್ಗೆ 9ರಿಂದ ಬೆಳಗ್ಗೆ 11 ಗಂಟೆಯವರೆಗೆ ರಾಜ್ಯಾದ್ಯಂತ ಬಂದ್ಗೆ (Karnataka Bandh) ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕರೆ ಕೊಟ್ಟಿದ್ದಾರೆ. 2 ಗಂಟೆ ಕಾಲ ಅಂಗಡಿ ಮುಂಗಟ್ಟು ಮುಚ್ಚಿ ಬಂದ್ಗೆ ಸಹಕರಿಸಲು ಮನವಿ ಮಾಡಿಕೊಂಡಿದ್ದಾರೆ.
ಇದೇ ವೇಳೆ ಅವರು ಮಾತನಾಡಿ, ಇದೇ ವೇಳೆ ಅವರು ಮಾತನಾಡಿ, ಬಂದ್ ವೇಳೆ ಯಾರಿಗೂ ತೊಂದರೆ ನೀಡಲ್ಲ. ಶಾಂತಿ ರೀತಿಯಿಂದ ಪ್ರತಿಭಟನೆ ಮಾಡಬೇಕು. ವ್ಯಾಪಾರವನ್ನ ಎರಡು ಗಂಟೆಗಳ ಕಾಲ ಅಂಗಡಿ ಮುಗ್ಗಟ್ಟು ಬಂದ್ ಮಾಡಿ ಬೆಂಬಲ ನೀಡುವಂತೆ ಮನವಿ ಮಾಡಿದರು.
ಇನ್ನೂ ಸಮಾರಂಭಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಗೈರು ಆಗಿದ್ದು, ಎದ್ದು ಕಾಣುತಿತ್ತು. ಅವರು ಅರಸೀಕೆರೆಯಲ್ಲಿ ಸಂಗೋಳ್ಳಿ ರಾಯಣ ಪ್ರತಿಮೆ ಅನಾವರಣಾ ಕಾರ್ಯಕ್ರಮಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಈ ನಡುವೆ ಸಭೆಗೆ ಕಾಂಗ್ರೆಸ್ ನಾಯಕರುಗಳು ಕೊರಟಗೆರೆ ವಿಧಾನಸಭೆಯ ನಾನಾ ಊರುಗಳಿಗೆ ಜನತೆಯನ್ನು ಕರೆ ತರಲು ಬಸ್ಗಳ ವ್ಯವಸ್ಥೆಯನ್ನು ಮಾಡಿದ್ದು ಕೂಡ ಕಂಡು ಬಂದಿತು. ಇದೇ ವೇಳೆ ಕೊರಟಗೆರೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಕಾಂಗ್ರೆಸ್ ರಾಜೀವ ಭವನ ಕಟ್ಟಡವನ್ನು ಕೂಡ ಲೋಕರ್ಪಾಣೆ ಮಾಡಲಾಯಿತು.