ಮಾ.25 ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ : ಬೆಂಗಳೂರಿನಲ್ಲಿ ಬೃಹತ್ `ರೋಡ್ ಶೋ'

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 25 ರಂದು ಮತ್ತೊಮ್ಮೆ ರಾಜ್ಯಕ್ಕೆ ಭೇಟಿ ನೀಡಲಿದ್ದು, ಬೆಂಗಳೂರು, ಚಿಕ್ಕಬಳ್ಳಾಪುರ ಹಾಗೂ ದಾವಣಗೆರೆಯಲ್ಲಿ ನಡೆಯುವ ವಿವಿಧ ಸಮಾರಂಭಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಾರ್ಚ್ 25 ರ ಬೆಳಗ್ಗೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸುವ ಪ್ರಧಾನಿ ಮೋದಿ ಅವರು ವೈಟ್ ಫೀಲ್ಡ್ ನಲ್ಲಿ ಮಹಾದೇವಪುರ ಕ್ಷೇತ್ರದ ಸತ್ಯ ಸಾಯಿ ಆಶ್ರಮದಿಂದ ವೈಟ್ ಫೀಲ್ಡ್ ಮೆಟ್ರೋ ಸ್ಟೇಷನ್ ವರೆಗೂ ಸುಮಾರು 1 ಕಿ.ಮೀ.
ರೋಡ್ ಶೋ ಬಳಿಕ ಪ್ರಧಾನಿ ಮೋದಿ ಅವರು ಚಿಕ್ಕಬಳ್ಳಾಪುರದ ವೈದ್ಯಕೀಯ ಕಾಲೇಜು ಉದ್ಘಾಟನೆಗೆ ತೆರಳಲಿದ್ದಾರೆ. ನಂತರ ಮಧ್ಯಾಹ್ನ ದಾವಣಗೆರೆಯಲ್ಲಿ ನಡೆಯಲಿರುವ ಬಿಜೆಪಿ ವಿಜಯ ಸಂಕಲ್ಪ ರಥಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.