ಮಾ.3 ರಂದು ಬಸವಕಲ್ಯಾಣಕ್ಕೆ ಬಿಜೆಪಿ ಚಾಣಕ್ಯ 'ಅಮಿತ್ ಶಾ' ಭೇಟಿ

ಬೀದರ್: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ರಾಜಕೀಯ ನಾಯಕರ ಚುನಾವಣೆ ಪ್ರಚಾರ ಭರಾಟೆ ಜೋರಾಗಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ನಾನಾ ಕಸರತ್ತು ನಡೆಸಿದ್ದಾರೆ.
ಹಾಗಾಗಿ ಕೇಂದ್ರ ನಾಯಕರು ಆಗಾಗ ರಾಜ್ಯಕ್ಕೆ ಭೇಟಿ ನೀಡುತ್ತಾರೆ.
ಅಮಿತ್ ಶಾ 11 ಗಂಟೆಗೆ ಬಸವಕಲ್ಯಾಣ ಭೇಟಿ ನೀಡಿದ ಬಳಿಕ 11:30ಕ್ಕೆ ಅನುಭವ ಮಂಟಪಕ್ಕೆ ಭೇಟಿ ನೀಡಿ, ಅಲ್ಲಿಂದಲ್ಲೇ ವಿಜಯ ಸಂಕಲ್ಪ ಯಾತ್ರೆ ರಥಕ್ಕೆ ಚಾಲನೆ ನೀಡಲಿದ್ದಾರೆ. ನಂತರ ಬಸವಕಲ್ಯಾಣ ಪಟ್ಟಣದಲ್ಲಿ ಅದ್ದೂರಿ ರೋಡ್ ಶೋ ಮಾಡಿ ಸಮಾವೇಶದಲ್ಲಿ ಭಾಗಿಯಾಗುತ್ತಾರೆ ಎಂದರು.