ಮಾಜಿ ಪ್ರಧಾನಿ ದೇವೇಗೌಡರ ಹುಟ್ಟುಹಬ್ಬಕ್ಕೆ ಶುಭಕೋರಿದ ಸಿದ್ದರಾಮಯ್ಯ
ಮಾಜಿ ಪ್ರಧಾನಿ ದೇವೇಗೌಡರ ಹುಟ್ಟುಹಬ್ಬಕ್ಕೆ ಶುಭಕೋರಿದ ಸಿದ್ದರಾಮಯ್ಯ
ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪಕ್ಷದ ವರಿಷ್ಠರಾದ ಹೆಚ್.ಡಿ.ದೇವೇಗೌಡ ಅವರಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಭಾಶಯಗಳು ಹೇಳಿದ್ದಾರೆ.
88ನೇ ವರ್ಷಕ್ಕೆ ಕಾಲಿರಿಸುತ್ತಿರುವ ದೇವೇಗೌಡರಿಗೆ, ಹಲವು ವರ್ಷಗಳ ಕಾಲ ರಾಜಕೀಯ ಒಡನಾಡಿಯಾಗಿದ್ದ ಕಾಂಗ್ರೆಸ್ ನಾಯಕರಾದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಶುಭಾಶಯ ಕೋರಿದ್ದಾರೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಶುಭಕೋರಿದ್ದ, "ಮಾಜಿ ಪ್ರಧಾನಿ ಮತ್ತು ಜೆಡಿಎಸ್ ಪಕ್ಷದ ಹಿರಿಯ ನಾಯಕ ಹೆಚ್.ಡಿ.ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯಗಳು. ಆಯುಷ್ಯ, ಆರೋಗ್ಯ ನಿಮ್ಮದಾಗಲಿ. ರಾಜ್ಯ ಮತ್ತು ದೇಶಕ್ಕೆ ನಿಮ್ಮ ಅನುಭವದ ಮಾರ್ಗದರ್ಶನ ಸದಾ ಸಿಗಲಿ" ಎಂದು ಹಾರೈಸಿದ್ದಾರೆ.