ಮಾಜಿ ಮುಖ್ಯಮಂತ್ರಿ ಎಸ್ ಆರ್ ಬೊಮ್ಮಾಯಿ ಅವರ 98ನೇ ಜನ್ಮ ದಿನಾಚರಣೆ

ಮಾಜಿ ಮುಖ್ಯಮಂತ್ರಿ ಎಸ್ ಆರ್ ಬೊಮ್ಮಾಯಿ ಅವರ 98ನೇ ಜನ್ಮ ದಿನಾಚರಣೆ

ನಾಡಿನ ಧೀಮಂತ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ  ಶ್ರೀ ಎಸ್ ಆರ್ ಬೊಮ್ಮಾಯಿ ಅವರ 98ನೇ ಜನ್ಮ ದಿನಾಚರಣೆ ನಿಮಿತ್ಯ ಬೆಂಗಳೂರಿನ ಆರ್. ಟಿ. ನಗರದ ಮನೆಯಲ್ಲಿ ಅವರ ಭಾವಚಿತ್ರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ  ಅವರು 
ಪುಷ್ಪಾರ್ಚನೆ ಮಾಡುವ ಮೂಲಕ ಭಕ್ತಿ ಪೂರ್ವಕ ನಮನ ಸಲ್ಲಿಸಿದರು.
ಅನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನನ್ನ ತಂದೆ ನನಗೆ  ಪ್ರೇರಣಾ ಶಕ್ತಿ ಹಾಗೂ ನನಗೆ ಆದರ್ಶ ಪ್ರಾಯರಾಗಿದ್ದರು ಎಂದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು 3 ಜನ ಸಾವನ್ನಪ್ಪಿರುವುದು ನೋವಿನ ಸಂಗತಿ. ಈ ಕುರಿತು ತನಿಖೆ ನಡೆಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ. ಅಷ್ಟೇ ಅಲ್ಲ ಕುಡಿಯುವ ನೀರಿನ ಸುರಕ್ಷತೆಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಇಲಾಖೆಗೆ ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

9 ಲೈವ್ ನ್ಯೂಸ್ ಬೆಂಗಳೂರು