ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಬಿಗ್ ಶಾಕ್ : ಆಸ್ತಿ ಜಪ್ತಿ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಅಸ್ತು

ಬೆಂಗಳೂರು : ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಬಿಗ್ ಶಾಕ್ ಎದುರಾಗಿದ್ದು, ರೆಡ್ಡಿ ಆಸ್ತಿ ಜಪ್ತಿ ಪ್ರಕ್ರಿಯೆಗೆ ಸರ್ಕಾರ ಅನುಮತಿ ನೀಡಿದ್ದು, ಆಸ್ತಿ ಜಪ್ತಿ ಮಾಡಲು ಸಿಬಿಐಗೆ ಅನುಮತಿ ನೀಡಿ ಗೃಹ ಇಲಾಖೆ ಆದೇಶ ಹೊರಡಿಸಿದೆ.
ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಕಳೆದ ಆಗಸ್ಟ್ ತಿಂಗಳಲ್ಲೇ ಸಿಬಿಐ ಅರ್ಜಿ ಸಲ್ಲಿಸಿತ್ತು. ತೆಲಂಗಾಣ, ಆಂಧ್ರಪ್ರದೇಶದಲ್ಲಿನ ಆಸ್ತಿ ಜಪ್ತಿಗೆ ಅನುಮತಿ ಕೇಳಿತ್ತು. ಸರ್ಕಾರದ ವಿಳಂಬ ಹಿನ್ನೆಲೆ ಸಿಬಿಐ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿತ್ತು.ಇದೀಗ ಸರ್ಕಾರ ಗಾಲಿ ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಸಿಬಿಐಗೆ ಅನುಮತಿ ನೀಡಿದೆ.
ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತವರ ಕುಟುಂಬಕ್ಕೆ ಸೇರಿದ ಹೆಚ್ಚುವರಿ ಆಸ್ತಿಗಳನ್ನು ಜಪ್ತಿ ಮಾಡುವ ಸಂಬಂಧ ಸಿಬಿಐ ರಾಜ್ಯ ಸರ್ಕಾರಕ್ಕೆ ಕೇಳಿತ್ತು. ಇದೀಗ ರಾಜ್ಯ ಸರ್ಕಾರವು ಜನಾರ್ದನ ರೆಡ್ಡಿ ಆಸ್ತಿ ಜಪ್ತಿ ಮಾಡಲು ಅನುಮತಿ ನೀಡಿದೆ.