ಮಾಜಿ ಸಚಿವ ಜಮೀರ್ ಅಹ್ಮದ್ ಗೆ ಎಐಸಿಸಿ ಬುಲಾವ್

ಮಾಜಿ ಸಚಿವ ಜಮೀರ್ ಅಹ್ಮದ್ ಗೆ ಎಐಸಿಸಿ ಬುಲಾವ್

ಬೆಂಗಳೂರು: ಚಾಮರಾಜಪೇಟೆ ಶಾಸಕ, ಮಾಜಿ ಸಚಿವ ಜಮೀರ್ ಅಹಮದ್ ಅವರಿಗೆ ಎಐಸಿಸಿ ಬುಲಾವ್ ನೀಡಿದೆ. ಇಂದು ಜಮೀರ್ ಅಹಮದ್ ದೆಹಲಿಗೆ ತೆರಳಲಿದ್ದಾರೆ.

ಜಮೀರ್ ಅಹ್ಮದ್ ಪಕ್ಷದ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿದ್ದ ಹಿನ್ನೆಲೆಯಲ್ಲಿ ಮಾಹಿತಿ ಪಡೆದ ಕೇಂದ್ರ ನಾಯಕರು ದೆಹಲಿಗೆ ಬರುವಂತೆ ಸೂಚನೆ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರು ದೆಹಲಿಗೆ ಬಂದು ಭೇಟಿಯಾಗಲು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಅವರು ದೆಹಲಿಗೆ ತೆರಳಲಿದ್ದಾರೆ.