ಮಾಜಿ ಸಿಎಂ ಬಿಎಸ್‌ವೈ ಭೇಟಿಯಾದ ಹಾವೇರಿ ಶಾಸಕ ಓಲೇಕಾರ್ : ಟಿಕೆಟ್ ಕೈತಪ್ಪಿದ್ದಕ್ಕೆ ಅಸಮಾಧಾನ
ಬೆಂಗಳೂರು : ವಿಧಾನಸಭೆ ಚುನಾವಣೆ ಸಮೀಪದ ಬೆನ್ನಲ್ಲೇ ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಆರಂಭವಾಗಿದೆ. ಇದೀಗ ಬಿಜೆಪಿಗೆ ಶಾಸಕ 'ನೆಹರು ಓಲೇಕಾರ್' ರಾಜೀನಾಮೆ ನೀಡಿದ್ದಾರೆ. ಇಂದು ಬಿಎಸ್‌ವೈ ಅವರನ್ನು ಹಾವೇರಿ ಶಾಸಕ ಓಲೇಕಾರ್ ಭೇಟಿಯಾಗಿದ್ದಾರೆ ಎಂದು ವರದಿಯಾಗಿದೆ.
ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿದ್ದ ಶಾಸಕ 'ನೆಹರು ಓಲೇಕಾರ್' ರಾಜೀನಾಮೆ ನೀಡಿದ್ದಾರೆ. ಅಷ್ಟೇ ಅಲ್ಲದೇ ಸಿಎಂ ಬೊಮ್ಮಾಯಿ ಹಾಗೂ ಬಿಜೆಪಿ ನಾಯಕರ ವಿರುದ್ಧ ನೇರವಾಗಿ ಅಸಮಾಧಾನ ಹೊರ ಹಾಕಿದ್ದರು. ಈ ಬೆನ್ನಲ್ಲೆ ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಹಾವೇರಿ ಶಾಸಕ ಓಲೇಕಾರ್ ಬೆಂಗಳೂರಿನ ಕುಮಾರಕೃಪಾ ರಸ್ತೆಯ 'ಕಾವೇರಿ' ನಿವಾಸದಲ್ಲಿ ಭೇಟಿಯಾಗಿದ್ದಾರೆ. ಹಾವೇರಿ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ನೆಹರು ಓಲೇಕಾರ್, ಟಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿದ್ದಾರೆ.
ನಿನ್ನ ನಂಬಿದ್ದೇನೆ, ದಯಮಾಡಿ ಕೈಬಿಡಬೇಡ : ಕಾಪು ಸಿದ್ದಲಿಂಗ ಸ್ವಾಮಿಗೆ ವಿ ಸೋಮಣ್ಣ ಮನವಿ
ಮೈಸೂರು: ರಾಜ್ಯದಲ್ಲೆಡೆ ಮುಂದಿನ ವಿಧಾನಸಭೆ ಚುನಾವಣೆ ರಣತಂತ್ರ ರೂಪಿಸುತ್ತಿದ್ದು ಈ ಬೆನ್ನಲ್ಲೆ ಬಿಜೆಪಿ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೆ ಟಿಕೆಟ್‌ಗಾಗಿ ಬಂಡಾಯ ಭುಗಿಲೆದ್ದಿದೆ. ಈನಿಟ್ಟಿನಲ್ಲಿ ಕಾಪು ಸಿದ್ದಲಿಂಗ ಸ್ವಾಮಿಗೆ ವಿ ಸೋಮಣ್ಣ ಭೇಟಿ ನೀಡಿ ಮನವಿ ಮಾಡಿದ್ದಾರೆ.
ವಸತಿ ಸಚಿವ ವಿ. ಸೋಮಣ್ಣ ಅವರು ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆಪ್ತ ಕಾಪು ಸಿದ್ದಲಿಂಗ ಸ್ವಾಮಿಯವರನ್ನು ಭೇಟಿಯಾಗಿದ್ದಾರೆ.
ಈ ವೇಳೆ ವಿ. ಸೋಮಣ್ಣ ನಿನ್ನ ನಂಬಿದ್ದೇನೆ, ದಯಮಾಡಿ ಕೈಬಿಡಬೇಡ ಎಂದು ಕಾಪು ಸಿದ್ದಲಿಂಗಸ್ವಾಮಿ ಅವರಿಗೆ ಕೈ ಮುಗಿದು ಮನವಿ ಮಾಡಿದ್ದಾರೆ. ಇದೀಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.