ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಈ ಪರಿಸ್ಥಿತಿ ಬರಬಾರದಿತ್ತು: ಬಿ.ವೈ.ವಿಜಯೇಂದ್ರ

ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಈ ಪರಿಸ್ಥಿತಿ ಬರಬಾರದಿತ್ತು: ಬಿ.ವೈ.ವಿಜಯೇಂದ್ರ

ರಾಯಚೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಈ ಪರಿಸ್ಥಿತಿ ಬರಬಾರದಿತ್ತು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯವಾಡಿದರು.

ನಗರದಲ್ಲಿ ಯುವ ಮೋರ್ಚಾ ಸಮಾವೇಶದ ಬಳಿಕ ಸುದ್ದಿಗಾರರ ಜತೆ ಮಾತನಾಡಿ, ಕ್ಷೇತ್ರ ಹುಡುಕುವ ಪರಿಸ್ಥಿತಿ ಬರಬಾರದಿತ್ತು.

ಕಳೆದ ಬಾರಿ ಅವರ ವಿರುದ್ಧ ನಾನು ಸ್ಪರ್ಧಿಸುವ ಸನ್ನಿವೇಶ ಏರ್ಪಟ್ಟಿತ್ತು. ಆದರೆ, ಈ ಬಾರಿ ಯಡಿಯೂರಪ್ಪನವರು ತಮ್ಮ ಕ್ಷೇತ್ರ ಬಿಟ್ಟುಕೊಟ್ಟಿದ್ದಾರೆ. ವರುಣಾದಲ್ಲಿ ಯಾರು ಸ್ಪರ್ಧಿಸಬೇಕು ಎನ್ನುವುದನ್ನು ಪಕ್ಷದ ವರಿಷ್ಠರು ನಿರ್ಧರಿಸಲಿದ್ದಾರೆ. ಮುಂದಿನ ಮುಖ್ಯಮಂತ್ರಿ ಯಾರೆಂಬುದು ಕೂಡ ಪಕ್ಷದ ಮುಖಂಡರಿಗೆ ಬಿಟ್ಟ ವಿಚಾರ ಎಂದರು.ಸೋಮಣ್ಣನವರು ಹಿರಿಯ ನಾಯಕರು. ಅವರು ಏನೇ ಅಂದರೂ ಆಶೀರ್ವಾದ ಎಂದು ಭಾವಿಸುವೆ. ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದು, ಎಲ್ಲ ಕಡೆ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಸೂಕ್ತ ಅಭ್ಯರ್ಥಿಗಳಿಗೆ ಪಕ್ಷ ಟಿಕೆಟ್ ನೀಡಲಿದೆ ಎಂದರು.