ಮಾಡಾಳ್ ವಿರೂಪಾಕ್ಷಪ್ಪಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂಕೋರ್ಟ್

ಮಾಡಾಳ್ ವಿರೂಪಾಕ್ಷಪ್ಪಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂಕೋರ್ಟ್

ವದೆಹಲಿ - ಲಂಚ ಪ್ರಕರಣ ಸಂಬಂಧ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಈ ಬಗ್ಗೆ ಉತ್ತರಿಸುವಂತೆ ಸೂಚಿಸಿ ನೋಟಿಸ್ ಜಾರಿ ಮಾಡಿದೆ.

ಭ್ರಷ್ಟಾಚಾರ, ಲಂಚ ಪ್ರಕರಣದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಹೈಕೋರ್ಟ್ ಮಧ್ಯಂತರ ಜಾಮೀನು ಆದೇಶ ನೀಡಿದೆ. ಈ ಆದೇಶ ಪ್ರಶ್ನಿಸಿ ಲೋಕಾಯುಕ್ತ ಪೊಲೀಸರು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಸೋಮವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಅನಿರುದ್ಧ ಬೋಸ್ ನೇತೃತ್ವದ ಪೀಠ ವಿರೂಪಾಕ್ಷಪ್ಪಗೆ ನೋಟಿಸ್ ಜಾರಿ ಮಾಡಿತು.
ವಿಚಾರಣೆ ವೇಳೆ ಲೋಕಾಯುಕ್ತ ಪರ ವಕೀಲರು ಮಧ್ಯಂತರ ಜಾಮೀನು ರದ್ದು ಮಾಡಿ ಹೈಕೋರ್ಟ್ ವಿಚಾರಣೆಗೂ ತಡೆ ನೀಡಬೇಕು ಎಂದು ಮನವಿ ಮಾಡಿದರು. ಆದರೆ ಇದಕ್ಕೆ ನಿರಾಕರಿಸಿದ ಕೋರ್ಟ್, ಸ್ಪಷ್ಟನೆ ನೀಡುವಂತೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.