ಮಾರಕಾಸ್ತ್ರಗಳಿಂದ ಕೊಚ್ಚಿ ಕನ್ನಡಪರ ಸಂಘಟನೆಯ ತಾಲೂಕು ಅಧ್ಯಕ್ಷನ ಭೀಕರ ಕೊಲೆ

ಮಾರಕಾಸ್ತ್ರಗಳಿಂದ ಕೊಚ್ಚಿ ಕನ್ನಡಪರ ಸಂಘಟನೆಯ ತಾಲೂಕು ಅಧ್ಯಕ್ಷನ ಭೀಕರ ಕೊಲೆ

ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಹೊಸಕೆರೆ ಡಾಬಾ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಕನ್ನಡಪರ ಸಂಘಟನೆಯ ತಾಲೂಕು ಅಧ್ಯಕ್ಷನನ್ನು ದುಷ್ಕರ್ಮಿಗಳು ಕೊಲೆ ಮಾಡಿರವ ಘಟನೆ ನಡೆದಿದೆ.

30 ವರ್ಷದ ಗೌರಿಪುರ ಗ್ರಾಮದ ರಾಮಕೃಷ್ಣ ಮೃತಪಟ್ಟಿದ್ದಾರೆ.

ಅರ್ಜುನ್ ಮತ್ತು ಪ್ರಶಾಂತ್ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಜಗಳೂರು ತಾಲೂಕಿನ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆಯ ತಾಲೂಧ್ಯಕ್ಷರಾಗಿದ್ದ ರಾಮಕೃಷ್ಣ, ಇತ್ತೀಚಿಗೆ ಗ್ರಾಮ ಪಂಚಾಯತಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ದೂರು ನೀಡಿದ್ದರು. ಪೊಲೀಸ್‌ ವರಿಷ್ಠಾಧಿಕಾರಿ ರಿಷ್ಯಂತ್‌ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.