ಮಾರಕಾಸ್ತ್ರದಿಂದ ಕೊಚ್ಚಿ SSLC ವಿದ್ಯಾರ್ಥಿಯ ಬರ್ಬರ ಹತ್ಯೆ: ದುಷ್ಕರ್ಮಿಗಳು ಪರಾರಿ

ಬೆಳಗಾವಿ: ಮಾರಕಾಸ್ತ್ರದಿಂದ ಇರಿದು SSLC ವಿದ್ಯಾರ್ಥಿಯ ಬರ್ಬರ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿರುವಂತಹ ಘಟನೆ ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದ ಬಳಿ ನಡೆದಿದೆ.
ಗಂಧದ ಮರ ಕದಿಯಲು ಬಂದಿದ್ದ ಇಬ್ಬರ ಬಂಧನ: ಓರ್ವ ಸಾವು
ಚಿಕ್ಕಮಗಳೂರು: ಅರಣ್ಯ ಇಲಾಖೆ ಅಧಿಕಾರಿಗಳ ವಶದಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಚಿಕ್ಕಮಗಳೂರು ತಾಲೂಕಿನ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಲಾಖೆಯ ಕಲ್ಲುಹೊಳ ಕೋಟೆಯ ಆನೆ ಶಿಬಿರದ ಶೌಚಾಲಯದಲ್ಲಿ ವ್ಯಕ್ತಿ ಶವ ಪತ್ತೆಯಾಗಿದೆ. ರಾತ್ರಿ ಗಂಧದ ಮರ ಕದಿಯಲು ಬಂದಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದರು. ಅರಣ್ಯ ಇಲಾಖೆ ಕ್ವಾರ್ಟರ್ಸ್ನಲ್ಲಿ ವ್ಯಕ್ತಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ನಂತರ ಆನೆ ಶಿಬಿರಕ್ಕೆ ವ್ಯಕ್ತಿಯ ಶವ ತಂದಿದ್ದಾರೆಂದು ಅರಣ್ಯ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆರೋಪಿಸುತ್ತಿದ್ದಾರೆ. ಸ್ಥಳಕ್ಕೆ ಸಖರಾಯಪಟ್ಟಣ ಪೊಲೀಸರು ಭೇಟಿ, ಪರಿಶೀಲನೆ ಮಾಡಿದರು.
ಬೈಕ್ಗೆ ಗೂಡ್ಸ್ ವಾಹನ ಡಿಕ್ಕಿ: ಇಬ್ಬರು ಸಾವು
ತುಮಕೂರು: ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವಂತಹ ಘಟನೆ ಜಿಲ್ಲೆ ತಿಪಟೂರು ತಾಲೂಕಿನ ಕೊನೆಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ನಡೆದಿದೆ.
ಶಮಂತಾಚಾರ್ (55), ಶಿವಣ್ಣ (50) ಮೃತ ದುರ್ದೈವಿಗಳು. ಅರಸೀಕೆರೆ ಕಡೆಯಿಂದ ತಿಪಟೂರು ಶಮಂತಾಚಾರ್ ಹಾಗೂ ಶಿವಣ್ಣ ಕಡೆಗೆ ಬೈಕ್ ಮೇಲೆ ಬರುತ್ತಿದ್ದರು. ಈ ವೇಳೆ ಗೂಡ್ಸ್ ವಾಹನ ಚಾಲಕನ ಅಜಾಗರೂಕತೆಯಿಂದ ಬೈಕ್ಗೆ ಡಿಕ್ಕಿಯಾಗಿದ್ದು, ಬೈಕ್ ಸವಾರರಿಬ್ಬರೂ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ತಿಪಟೂರು ತಾಲೂಕಿನ ಹೊನ್ನವಳ್ಳಿ ಪೊಲೀಸರು ಭೇಟಿ, ಪರಿಶೀಲನೆ ಮಾಡಿದ್ದು,
ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಹಾಸನ ಜಿಲ್ಲೆಯಲ್ಲಿ ಮಹಾ ಮಳೆಗೆ ಮತ್ತೊಂದು ಬಲಿ
ಹಾಸನ: ಶಾಲೆಗೆ ತೆರಳುತ್ತಿದ್ದಾಗ ವಿದ್ಯಾರ್ಥಿನಿ ನೀರುಪಾಲಾಗಿರುವಂತಹ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ದಡ್ಡಿಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಜಿಲ್ಲೆಯಲ್ಲಿ ಮಹಾ ಮಳೆಗೆ ಮತ್ತೊಂದು ಬಲಿಯಾಗಿದೆ. ರಂಜಿತಾ(11) ಮೃತ ವಿದ್ಯಾರ್ಥಿ. ಸಹೋದರನ ಜೊತೆ ಬೈಕ್ನಲ್ಲಿ ಶಾಲೆಗೆ ತೆರಳುತ್ತಿದ್ದ ರಂಜಿತಾ, ಈ ವೇಳೆ ಜಾರಿ ಬಿದ್ದು ನೀರಿನಲ್ಲಿ ಕೊಚ್ಚಿಹೋಗಿದ್ದಾಳೆ. ಕೆರೆ ಕೋಡಿ ಬಿದ್ದು ಹರಿಯುತ್ತಿದ್ದ ನೀರಲ್ಲಿ ಬಾಲಕಿ ಕೊಚ್ಚಿ ಹೋಗಿದ್ದಾಳೆ. ಚನ್ನರಾಯಪಟ್ಟಣ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.