ಮಾರುಕಟ್ಟೆಗಳಲ್ಲಿ ಆ್ಯಸಿಡ್ ತರಕಾರಿಯಂತೆ ಮಾರಾಟವಾಗುತ್ತಿದೆ: DCW ಮುಖ್ಯಸ್ಥೆ ಕಳವಳ

ಮಾರುಕಟ್ಟೆಗಳಲ್ಲಿ ಆ್ಯಸಿಡ್ ತರಕಾರಿಯಂತೆ ಮಾರಾಟವಾಗುತ್ತಿದೆ: DCW ಮುಖ್ಯಸ್ಥೆ ಕಳವಳ

ದೆಹಲಿಯಲ್ಲಿ ಶಾಲಾ ಬಾಲಕಿ ಮೇಲೆ ನಡೆದ ಆ್ಯಸಿಡ್ ದಾಳಿ ಜನರನ್ನು ಭಯಭೀತಗೊಳಿಸಿದೆ. ಈ ಭೀಕರ ಘಟನೆ ನಡೆದ ಬಳಿಕ ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಮಾರುಕಟ್ಟೆಗಳಲ್ಲಿ ಆ್ಯಸಿಡ್ ತರಕಾರಿಯಂತೆ ಮಾರಾಟವಾಗುತ್ತಿದೆ ಎಂದು ಕಿಡಿಕಾರಿ ಕಳವಳ ವ್ಯಕ್ತಪಡಿಸಿದ್ದಾರೆ. ಆ್ಯಸಿಡ್ ಮಾರಾಟದ ಮೇಲಿನ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಾವು ನ್ಯಾಯಾಲಯವನ್ನು ಒತ್ತಾಯಿಸುತ್ತೇವೆ. ದಾಳಿ ನಡೆಸಿದ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ತಿಳಿಸಿದ್ದೇವೆ ಎಂದಿದ್ದಾರೆ.